2018ರಲ್ಲಿ ಭಾರಿ ಸದ್ದು ಮಾಡಿದ್ದ ಮೀಟೂ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಅರ್ಜುನ್ ಸರ್ಜಾಗೆ ಗೆಲುವು ಸಿಕ್ಕಿದೆ. ಅರ್ಜುನ್ ಸರ್ಜಾ ಮೇಲೆ ನಟಿ ಶ್ರುತಿ ಹರಿಹರನ್ ಅವರು ಕೆಲವು ಗಂಭೀರ ಆರೋಪಗಳನ್ನು ಹೊರಿಸಿದ್ದರು. ತಮ್ಮ ಜೊತೆ ಅರ್ಜುನ್ ಸರ್ಜಾ ಅವರು ಅಸಭ್ಯವಾಗಿ ನಡೆದುಕೊಂಡಿದ್ದಾರೆ. ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಶ್ರುತಿ ಹರಿಹರನ್ ಆರೋಪಿಸಿದ್ದರು.
ಆ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಮೂರು ವರ್ಷ ತನಿಖೆ ನಡೆಸಿದರೂ ಕೂಡ ಪೊಲೀಸರಿಗೆ ಸೂಕ್ತ ಸಾಕ್ಷಿಗಳು ಸಿಕ್ಕಿಲ್ಲ.ಹಾಗಾಗಿ ಪೊಲೀಸರು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದರು.ಈ ವರದಿಗೆ ಶ್ರುತಿ ಹರಿಹರನ್ ಆಕ್ಷೇಪಣೆ ಸಲ್ಲಿಸಿಲ್ಲ.ಈ ಕಾರಣಕ್ಕೆ 8ನೇ ಎಸಿಎಂಎಂ ನ್ಯಾಯಾಲಯ ವರದಿಯನ್ನು ಅಂಗೀಕರಿಸಿದೆ. ಹೀಗಾಗಿ ಪ್ರಕರಣದಲ್ಲಿ ಅರ್ಜುನ್ ಸರ್ಜಾಗೆ ಗೆಲುವಾಗಿದೆ.
