ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿರುವ ಪಂಚ ಗ್ಯಾರಂಟಿಗಳನ್ನು ಜಾರಿಗೆ ತಂದಿದೆ. ಆದರೆ ಇದರಿಂದ ಸರ್ಕಾರಕ್ಕೆ ಸಾಕಷ್ಟು ಹೊರೆಯಾಗುತ್ತಿದೆ. ಈ ಹೊರೆಯನ್ನ ತಪ್ಪಿಸಲು ಸರ್ಕಾರ ಬಿಪಿಎಲ್ ಕಾರ್ಡ್ಗಳನ್ನೇ ಕಡಿಮೆ ಮಾಡಲು ಮುಂದಾಗಿದೆ ಎನ್ನಲಾಗುತ್ತಿದೆ. ಹಾಗಾಗಿ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 11 ಲಕ್ಷ ಪಡಿತರ ಚೀಟಿಗಳನ್ನ ರದ್ದು ಮಾಡಲಾಗಿದೆ ಎಂದು ಬಿಜೆಪಿ ನಾಯಕ ಮಾಜಿ ಸಚಿವ ಶಾಸಕ ಸುನಿಲ್ ಕುಮಾರ್ ಗಂಭಿರ ಆರೋಪ ಮಾಡಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಒಟ್ಟು 83 ರೇಷನ್ ಕಾರ್ಡ್ಗಳು ರದ್ದು ಮಾಡಲಾಗಿದೆ. ಒಟ್ಟು 3925 ಬಿಪಿಎಲ್ ಕಾರ್ಡ್ಗಳು ಎಪಿಎಲ್ ಕಾರ್ಡ್ಗಳಾಗಿ ಬದಲಾವಣೆ ಮಾಡಲಾಗಿದೆ. ಟ್ಯಾಕ್ಸ್ ಪಾವತಿಸುತ್ತಿದ್ದಾರೆ ಎಂಬ ಕಾರಣಕ್ಕೆ 3408 ಬಿಪಿಎಲ್ ಕಾರ್ಡ್ಗಳು ಎಪಿಎಲ್ ಕಾರ್ಡ್ಗಳಾಗಿ ಬದಲಾವಣೆ ಮಾಡಲಾಗಿದೆ.
1,20,000ಕ್ಕಿಂತ ಹೆಚ್ಚಿನ ಆದಾಯ ಕಾರಣದಿಂದ 415 ಬಿಪಿಎಲ್ ಪಡಿತರ ಕಾರ್ಡ್ಗಳು ಎಪಿಎಲ್ ಕಾರ್ಡ್ಗಳಾಗಿ ಬದಲಾವಣೆ ಮಾಡಲಾಗಿದೆ. ಸರ್ಕಾರಿ ನೌಕರರು ಎಂಬ ಕಾರಣಕ್ಕೆ 102 ಕಾರ್ಡ್ಗಳು ಬದಲಾವಣೆ. ಅದೇ ರೀತಿಯಾಗಿ ಸಾವಿರಾರು ಕಾರ್ಡ್ಗಳು ವಿವಿಧ ತಾಂತ್ರಿಕ ಕಾರಣದಿಂದ ಅಮಾನತು ಮಾಡಲಾಗಿದೆ.
ಕೋಲಾರದಲ್ಲಿ 6500 ಬಿಪಿಎಲ್ ಕಾರ್ಡ್ಗಳನ್ನು ಎಪಿಎಲ್ ಕಾರ್ಡ್ಗಳಾಗಿ ಪರಿವರ್ತನೆ ಮಾಡುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ತೆರಿಗೆ ಪಾವತಿ ಮಾಡುತ್ತಿದ್ದಾರೆ ಎಂಬ ಕಾರಣ ನೀಡಿ 3500 ಕಾರ್ಡ್, ಸರ್ಕಾರಿ ನೌಕರರು ಅಂತ 80 ಕಾರ್ಡ್ ಬಿಪಿಎಲ್ನಿಂದ ಎಪಿಎಲ್ಗೆ ಬದಲಾವಣೆ ಮಾಡಲಾಗಿದೆ.
1, 20,000 ಕ್ಕಿಂತ ಹೆಚ್ಚಿನ ಆದಾಯ ಹೊಂದಿದ್ದಾರೆ ಅಂತ 2900 ಪಡಿತರ ಕಾರ್ಡ್ ಪರಿವರ್ತನೆ ಮಾಡಲಾಗಿದೆ. ಜಿಲ್ಲೆಯಲ್ಲಿ 6500 ಕಾರ್ಡುಗಳು ಎಪಿಎಲ್ಗೆ ಕನ್ವರ್ಟ್ ಮಾಡಲು ಗುರುತು ಮಾಡಿ ಅಮಾನತ್ತಿನಲ್ಲಿಡಲಾಗಿದೆ. ಪರಿವರ್ತನೆ ಕಾರ್ಯ ಚಾಲ್ತಿಯಲ್ಲಿದೆ ಎಂದು ಆಹಾರ ಇಲಾಖೆ ಉಪನಿರ್ದೇಶಕಿ ಲತಾ ಮಾಹಿತಿ ನೀಡಿದ್ದಾರೆ.
ಚಿಕ್ಕಬಳ್ಳಾಪುರದಲ್ಲೂ 2201 ಬಿಪಿಎಲ್ ಕಾರ್ಡ್ಗಳು ಎಪಿಎಲ್ಗೆ ಬದಲಾವಣೆ ಮಾಡಲಾಗಿದೆ. ಟ್ಯಾಕ್ಸ್ ಪಾವತಿ ಮಾಡುತ್ತಿದ್ದಾರೆ ಎಂಬ ಕಾರಣ ನೀಡಿ 1992 ಕಾರ್ಡ್ಗಳು ಎಪಿಎಲ್ಗೆ, ಸರ್ಕಾರಿ ನೌಕರರು ಅಂತ 31 ಕಾರ್ಡ್ ಮತ್ತು 1, 20000 ಕ್ಕಿಂತ ಹೆಚ್ಚಿನ ಆದಾಯ ಹೊಂದಿದ್ದಾರೆ ಅಂತ 178 ಪಡಿತರ ಚೀಟಿ ಬದಲಾವಣೆ ಮಾಡಲಾಗಿದೆ. ಜಿಲ್ಲೆಯಾದ್ಯಾಂತ 2021 ಕಾರ್ಡ್ಗಳು ಎಪಿಎಲ್ಗೆ ಪರಿವರ್ತನೆ ಮಾಡಲಾಗಿದೆ.
ಇನ್ನು ವಿಜಯಪುರದಲ್ಲಿ 4359, ಬಾಗಲಕೋಟೆ ಜಿಲ್ಲೆಯಲ್ಲಿ 6299, ಶಿವಮೊಗ್ಗ ಜಿಲ್ಲೆಯಲ್ಲಿ 2346 ಯಾವುದೇ ಕಾರ್ಡ್ ರದ್ದು ಆಗಿಲ್ಲ. ಮೈಸೂರಿನಲ್ಲಿ 4,221, ಬಳ್ಳಾರಿ ಜಿಲ್ಲೆಯಲ್ಲಿ 1848, ಕಲಬುರಗಿ ಜಿಲ್ಲೆಯಲ್ಲೂ 1925, ಮಂಡ್ಯದಲ್ಲಿ 2824, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 3019, ಚಿತ್ರದುರ್ಗ ಜಿಲ್ಲೆಯಲ್ಲಿ 1670, ದಾವಣಗೆರೆ ಜಿಲ್ಲೆಯಲ್ಲಿ ಒಟ್ಟು 1599 ಬಿಪಿಎಲ್ನಿಂದ ಎಪಿಎಲ್ ಕಾರ್ಡ್ಗೆ ವರ್ಗಾವಣೆ ಮಾಡಲಾಗಿದೆ.