ಬೆಂಗಳೂರು:- ಕೆಎಸ್ಆರ್ಟಿಸಿ ಹಾಗೂ ಇತರ ಮೂರು ಸಾರಿಗೆ ನಿಗಮಗಳ ಬಸ್ ಟಿಕೆಟ್ ದರ ಏರಿಕೆ ಶನಿವಾರ ಮಧ್ಯರಾತ್ರಿಯಿಂದಲೇ ಅನ್ವಯವಾಗಿದೆ. ಈ ವಿಚಾರವಾಗಿ ರಾಜ್ಯ ಸರ್ಕಾರ ಶನಿವಾರ ಮಾಧ್ಯಾಹ್ನ ಅಧಿಕೃತ ಆದೇಶ ಹೊರಡಿಸಿದೆ. ಕೆಎಸ್ಆರ್ಟಿಸಿ, ಬಿಎಂಟಿಸಿ, ಎನ್ಡಬ್ಲ್ಯುಕೆಆರ್ಟಿಸಿ ಹಾಗೂ ಕೆಕೆಆರ್ಟಿಸಿ ಬಸ್ ಟಿಕೆಟ್ ದರ ಶೇ 15ರಷ್ಟು ಹೆಚ್ಚಳವಾಗಿದೆ.
ರಾಮರಾಜ್ಯ ಸರ್ಕಾರ ನಿರ್ಮಾಣ ಮಾಡುವುದು ನನ್ನ ಗುರಿ: ಹೆಚ್ಡಿ ಕುಮಾರಸ್ವಾಮಿ!
ಈ ಮೂಲಕ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಗಾಯದ ಮೇಲೆ ಬರೆ ಬಿದ್ದಂತಾಗಿದೆ. ಇದೀಗ ನಿನ್ನೆಯಿಂದಲೇ ಬಸ್ ಪ್ರಯಾಣ ದರ ಏರಿಕೆಯಾಗಿದೆ. ಎಂದು ವರದಿಯಾಗಿದೆ.
ಸಾರಿಗೆ ಬಸ್ ಟಿಕೆಟ್ ದರ ಏರಿಕೆ ಬಗ್ಗೆ ಸರ್ಕಾರ ಸುಳಿವು ನೀಡುತ್ತಲೇ ಇತ್ತು. ಇದೀಗ ಅಧಿಕೃತವಾಗಿ ಆದೇಶ ಹೊರಡಿಸಿದ್ದು, ನಿನ್ನೆ ಮಧ್ಯರಾತ್ರಿಯಿಂದಲೇ ಸಾರಿಗೆ ಬಸ್ ಪ್ರಯಾಣ ದರ ಏರಿಕೆಯಾಗಿದೆ.
ಬಿಎಂಟಿಸಿ, ಕೆಎಸ್ ಆರ್ ಟಿಸಿ ಸೇರಿ ನಾಲ್ಕು ಸಾರಿಗೆ ಬಸ್ ಗಳ ದರ ಏರಿಕೆಯಾಗಿದ್ದು, ಶೇಕಡಾ 15 ರಷ್ಟು ಟಿಕೆಟ್ ದರ ಹೆಚ್ಚಳವಾಗಿದೆ.
ಕೆಎಸ್ಆರ್ಟಿಸಿ ಎಕ್ಸ್ಪ್ರೆಸ್ ಬಸ್ಗಳ ಹೊಸ ದರ ಪಟ್ಟಿ ಬಿಡುಗಡೆ ಮಾಡಿದೆ. ಹೊಸ ಟಿಕೆಟ್ ದರ ಪಟ್ಟಿ ಈ ಕೆಳಗಿನಂತೆ ಇದೆ ನೋಡಿ.
ಬೆಂಗಳೂರು – ತುಮಕೂರು ಪ್ರಯಾಣ ದರ: ಹಳೆಯ ದರ – 80 ರೂ. ಹೊಸ ದರ – 91 ರೂ.
ಬೆಂಗಳೂರು-ಮಂಡ್ಯ ಪ್ರಯಾಣ ದರ: ಹಳೆಯ ದರ- 116ರೂ. ಹೊಸ ದರ – 131 ರೂ.
ಬೆಂಗಳೂರು – ಮಂಗಳೂರು ಪ್ರಯಾಣ ದರ: ಹೊಸ ದರ 454 ರೂ.
ಬೆಂಗಳೂರಿನಿಂದ ಹಾಸನ ಟಿಕೆಟ್ ದರ 246 ರೂ.ಗೆ ಹೆಚ್ಚಳವಾಗಿದೆ.
ಬೆಂಗಳೂರು ನಿಂದ ಮೈಸೂರು ಟಿಕೆಟ್ ದರ 162 ರೂ.ಗೆ ಹೆಚ್ಚಳವಾಗಿದೆ.
ಬೆಂಗಳೂರು – ಬೆಳಗಾವಿ ಟಿಕೆಟ್ ದರ : ಹೊಸ ದರ 697 ರೂ.
ಬೆಂಗಳೂರು – ಹುಬ್ಬಳ್ಳಿಟಿಕೆಟ್ ದರ : ಹೊಸ ದರ 563 ರೂ.
ಬೆಂಗಳೂರು-ಹಾವೇರಿ ಟಿಕೆಟ್ ದರ: ಹೊಸ ದರ 474 ರೂ.
ಬೆಂಗಳೂರು-ಕಲಬುರಗಿ ಟಿಕೆಟ್ ದರ: ಹೊಸ ದರ 805 ರೂ.
ಬೆಂಗಳೂರು-ಶಿವಮೊಗ್ಗ ಟಿಕೆಟ್ ದರ: ಹೊಸ ದರ 356 ರೂ.
ಬೆಂಗಳೂರು-ಬಳ್ಳಾರಿ ಟಿಕೆಟ್ ದರ: ಹೊಸ ದರ 424 ರೂ.
ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳು ಆರ್ಥಿಕವಾಗಿ ಮುಂದುವರಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಆರ್ಥಿಕ ಪರಿಸ್ಥಿತಿಯ ಸುಧಾರಣೆಗೆ ಹಾಗೂ ಹಮ್ಮಿಕೊಳ್ಳಲಾಗಿರುವ ಯೋಜನೆಗಳನ್ನು ಜಾರಿಗೊಳಿಸಲು ಪ್ರಯಾಣಿಕ ಬಸ್ ದರಗಳನ್ನು ಶೇ.33ರಷ್ಟು ಹೆಚ್ಚಿಸಲು ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಶೇ.42ರಷ್ಟು ಹೆಚ್ಚಿಸುವಂತೆ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದರು ಇದಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟದಲ್ಲಿ ಸಭೆಯಲ್ಲಿ ಚರ್ಚಿ ಮಾಡಿದ ನಂತರ ಶೇ.15ರಷ್ಟು ಟಿಕೆಟ್ ದರ ಪರಿಷ್ಕರಣೆ ಮಾಡಲು ಗ್ರೀನ್ ಸಿಗ್ನಲ್ ಸಿಕ್ಕಿದೆ.