ಅಹಮ್ಮದಾಬಾದ್: ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬೀಳುವ ಮುನ್ನವೇ ಸಾರ್ವಜನಿಕರ ಜೇಬಿಗೆ ಹೊಡೆತ ಬಿದ್ದಿದೆ. ಅಮುಲ್ ಹಾಲಿನ ಬೆಲೆಯನ್ನು ಹೆಚ್ಚಿಸಲಾಗಿದೆ. ಅಮುಲ್ ಗೋಲ್ಡ್, ಅಮುಲ್ ಶಕ್ತಿ, ಅಮುಲ್ ಟೀ ಸ್ಪೆಷಲ್ ಬೆಲೆಯನ್ನು ಹೆಚ್ಚಿಸಲಾಗಿದೆ. ಪ್ರತಿ ಲೀಟರ್ಗೆ 2 ರೂ. ಹೆಚ್ಚಳ ಮಾಡಲಾಗಿದೆ. ಅಮುಲ್ ಹಾಲಿನ ಹೊಸ ಬೆಲೆ ಸೋಮವಾರ ಬೆಳಗ್ಗೆಯಿಂದಲೇ ಅನ್ವಯವಾಗಲಿದೆ.
IAF Recruitment 2024: ಭಾರತೀಯ ವಾಯುಪಡೆಯಲ್ಲಿ ಭರ್ಜರಿ ಉದ್ಯೋಗವಕಾಶ..! ತಿಂಗಳಿಗೆ ಸಂಬಳ 56,000
ಹಾಲಿನ ಒಟ್ಟಾರೆ ಕಾರ್ಯಾಚರಣೆ ಮತ್ತು ಉತ್ಪಾದನಾ ವೆಚ್ಚ ಹೆಚ್ಚಳದ ದೃಷ್ಟಿಯಿಂದ ಸೋಮವಾರದಿಂದ ಜಾರಿಗೆ ಬರುವಂತೆ ದರ ಪರಿಷ್ಕರಣೆ ಮಾಡಲಾಗಿದೆ. ಇದರೊಂದಿಗೆ ದೇಶದ ಎಲ್ಲ ಮಾರುಕಟ್ಟೆಗಳಲ್ಲಿ ಅಮುಲ್ ಪ್ಯಾಕೆಟ್ ಹಾಲಿನ ಬೆಲೆ ಲೀಟರ್ಗೆ 2 ರೂ. ಏರಿಕೆಯಾಗಲಿದೆ ಎಂದು ಗುಜರಾತ್ ಸಹಕಾರಿ ಹಾಲು ಮಾರಾಟ ಒಕ್ಕೂಟ ತಿಳಿಸಿದೆ. ಈ ಹಿಂದೆ 2023 ರ ಫೆಬ್ರವರಿಯಲ್ಲಿ GCMMF ಹಾಲಿನ ದರವನ್ನು ಹೆಚ್ಚಿಸಿತ್ತು. ಈ ವೇಳೆಯೂ ರೈತರ ಉತ್ಪಾದನಾ ವೆಚ್ಚವನ್ನು ಸರಿದೂಗಿಸಲು ಈ ಹೆಚ್ಚಳದ ಅಗತ್ಯವಿದೆ ಎಂದು ಎಂಡಿ ಜಯನ್ ಮೆಹ್ತಾ ಹೇಳಿದ್ದರು.