ಬೆಂಗಳೂರು:- ರೇಣುಕಾಸ್ವಾಮಿ ಕೇಸ್ನಲ್ಲಿ ನಟ ದರ್ಶನ್ ಅವರು ಜೈಲಿಗೆ ಹೋಗಿ ಬಂದ ನಂತರ ಮತ್ತಷ್ಟು ಫೇಮಸ್ ಆಗಿದ್ದಾರೆ. ಅವರ ಫ್ಯಾನ್ಸ್ ಬೇಸ್ ಸಿಕ್ಕಾಪಟ್ಟೆ ಹೆಚ್ಚಾಗಿದೆ. ಇತ್ತೀಚೆಗಂತೂ ಅವರ ಕ್ರೇಜ್ ಭಾರೀ ಹೆಚ್ಚಾಗಿದ್ದು ರಿ ರಿಲೀಸ್ ಆದ ಸಿನಿಮಾಗಳಿಗೆ ಭರ್ಜರಿ ರೆಸ್ಪಾನ್ಸ್ ಬಂದಿದೆ.
ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಹುಟ್ಟುಹಬ್ಬದ ಸಂಭ್ರಮ ಮನೆ ಮಾಡಿದೆ. ರಾಜ್ಯಾದ್ಯಂತ ಅವರ ಅಭಿಮಾನಿಗಳು ಡಿಬಾಸ್ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಇದೀಗ ಫ್ಯಾನ್ಸ್ಗೆ ಶಾಕ್ ಆಗಿದೆ.
ನಟ ದರ್ಶನ್ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಹೊತ್ತಿನಲ್ಲೇ ಹೊಸಕೋಟೆ ಪುರಸಭೆಯು ದರ್ಶನ್ ಬ್ಯಾನರ್ ತೆರವುಗೊಳಿಸುವ ಮೂಲಕ ಫ್ಯಾನ್ಸ್ಗೆ ಶಾಕ್ ನೀಡಿದೆ.
ಹುಟ್ಟುಹಬ್ಬ ಆಚರಣೆ ಹಿನ್ನೆಲೆ ಅಭಿಮಾನಿಗಳು ದರ್ಶನ್ ಬ್ಯಾನರ್ ಹಾಕಿದ್ದರು. ಈ ಬ್ಯಾನರ್ಗಳನ್ನು ಹೊಸಕೋಟೆ ಪುರಸಭೆ ಸಿಬ್ಬಂದಿ ತೆರವುಗೊಳಿಸಿದ್ದು, ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ.
ದರ್ಶನ್ 48ನೇ ವರ್ಷದ ಬರ್ತ್ಡೇ ಆಚರಿಸಿಕೊಳ್ಳುತ್ತಿದ್ದಾರೆ. ಪತ್ನಿ ವಿಜಯಲಕ್ಷ್ಮೀ, ನಟ ಧನ್ವೀರ್, ಚಿಕ್ಕಣ್ಣ ಇನ್ಸ್ಟಾಗ್ರಾಂನಲ್ಲಿ ದರ್ಶನ್ ಜೊತೆಗಿನ ಫೋಟೋ ಹಂಚಿಕೊಂಡು ಶುಭಾಶಯ ತಿಳಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ದರ್ಶನ್ಗೆ ಬರ್ತ್ಡೇ ವಿಶ್ಗಳ ಸುರಿಮಳೆಯೇ ಹರಿದುಬರುತ್ತಿದೆ.