ಬೆಂಗಳೂರು:– ಲೋಕಸಭಾ ಚುನಾವಣೆ ಪ್ರಚಾರದಲ್ಲಿ ಬ್ಯುಸಿಯಾಗಿರುವ ಡಿಕೆ ಶಿವಕುಮಾರ್ಗೆ ಮತ್ತೊಂದು ಸಂಕಷ್ಟ ಎದುರಾದಂತಾಗಿದೆ.
ಭಟ್ಟರಹಳ್ಳಿಯಲ್ಲಿ ಅವೈಜ್ಞಾನಿಕ ಮತಗಟ್ಟೆ ಬದಲಾವಣೆ, ಮತದಾನ ಬಹಿಷ್ಕಾರಕ್ಕೆ ಗ್ರಾಮಸ್ಥರಿಂದ ಎಚ್ಚರಿಕೆ!
ಅಕ್ರಮ ಆಸ್ತಿ ಪ್ರಕರಣದಲ್ಲಿ ಸಿಬಿಐ ತನಿಖೆ ರದ್ದು ಮಾಡಿ ರಾಜ್ಯ ಸರ್ಕಾರ, ಲೋಕಾಯುಕ್ತ ತನಿಖೆಗೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸ್, ಕಳೆದ ಪ್ರೆಬ್ರವರಿ ತಿಂಗಳಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಿತ್ತು. ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ತಿ ಗಳಿಕೆ ವಿವರ ನೀಡುವಂತೆ ನೋಟಿಸ್ ಜಾರಿ ಮಾಡಿದ್ದು, ಸಿಬಿಐಗೆ ನೀಡಿರುವ ದಾಖಲಾತಿಗಳ ಮಾಹಿತಿಗಳನ್ನು ಒದಗಿಸುವಂತೆ ನೋಟಿಸ್ನಲ್ಲಿ ಸೂಚಿಸಿದೆ.