ಕೋಲಾರ: ಕೆಎಂಎಫ್ ಹಾಲಿನ ದರ ಏರಿಕೆ ಮಾಡಿದ ಬೆನ್ನಲ್ಲೇ ರೈತರಿಗೆ ನೀಡುವ ಹಾಲಿನ ಬೆಲೆಯಲ್ಲಿ 2 ರೂಪಾಯಿ ಕಡಿತಗೊಳಿಸಿ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟ ರೈತರಿಗೆ ಬಿಗ್ ಶಾಕ್ ನೀಡಿದೆ. ಈಗಷ್ಟೇ ಮುಂಗಾರು ಆರಂಭವಾಗಿ ರೈತರು ನಿಟ್ಟುಸಿರು ಬಿಡುತ್ತಿದ್ದ ವೇಳೆ ಕೋಚಿಮುಲ್ ಆಡಳಿತ ಮಂಡಳಿ ದಿಢೀರ್ 2 ರೂ. ಕಡಿಮೆ ಮಾಡಿದ್ದರಿಂದ ರೈತರು ಕಂಗಾಲಾಗಿದ್ದಾರೆ. ಪ್ರತಿ ಲೀಟರ್ ಹಾಲಿನ ಮೇಲೆ 2 ರೂ. ಕಡಿತ ಮಾಡಿದ್ದು,
ಇಂದು ಬೆಳಿಗ್ಗೆಯಿಂದ ಜಾರಿಗೆ ಬರುವಂತೆ ಕೋಚಿಮುಲ್ ಆದೇಶ ಆದೇಶ ಹೊರಡಿಸಿದೆ. ಈ ಮೊದಲು ಪ್ರತಿ ಲೀಟರ್ ಹಾಲಿಗೆ 33.40 ರೂ. ನೀಡಲಾಗುತ್ತಿತ್ತು. ಕೋಚಿಮುಲ್ ಆದೇಶದಿಂದ ಉತ್ಪಾದಕರಿಗೆ ಪರಿಷ್ಕೃತ ದರ ಲೀಟರ್ ಗೆ 31.40 ರೂ. ಸಿಗಲಿದೆ. ಜನವರಿಯಲ್ಲಿ ಪ್ರತಿ ದಿನ ಕೋಚಿಮುಲ್ಗೆ 9.65 ಲಕ್ಷ ಲೀಟರ್ ಹಾಲು ಸಂಗ್ರಹ ವಾಗುತ್ತಿತ್ತು.
ರಾತ್ರಿ 9 ಗಂಟೆಯ ನಂತ್ರ ಊಟ ಮಾಡ್ತೀರಾ..? ಹಾಗಿದ್ರೆ ಈ ಎಲ್ಲಾ ಸಮಸ್ಯೆಗಳು ಎದುರಾಗುವುದು ಗ್ಯಾರಂಟಿ
ಆದರೆ ಜೂನ್ ತಿಂಗಳಿನಿಂದ ಪ್ರತಿ ದಿನ ಕೋಚಿಮುಲ್ಗೆ 12.37 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಕೋಲಾರ – ಚಿಕ್ಕಬಳ್ಳಾಪುರ ಎರಡೂ ಜಿಲ್ಲೆಗಳಿಂದ ಎರಡೂವರೆ ಲಕ್ಷ ಲೀಟರ್ ಹಾಲು ಹೆಚ್ಚಳವಾದ ಕಾರಣ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಕೋಚಿಮುಲ್ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗುತ್ತಿದೆ. ಈಗಾಗಲೇ ಲೀಟರ್ಗೆ 2 ರೂ. ಹೆಚ್ಚಳ ಮಾಡಿ ಕೆಎಂಎಫ್ ಆದೇಶ ಹೊರಡಿಸಿದೆ. ಈಗ ರೈತರಿಗೆ 2 ರೂ. ಕಡಿತ ಮಾಡಿದ್ದು ಆಕ್ರೋಶಕ್ಕೆ ಕಾರಣವಾಗಿದೆ.