ಬೆಂಗಳೂರು:- ಒಂದೆಡೆ ಉಪಚುನಾವಣೆ ಕಾವು ರಂಗೇರಿದ್ದು, ಮತ್ತೊಂದು ಕಡೆ ಜೆಡಿಎಸ್ ನಲ್ಲೇ ಅಸಮಾಧಾನ ಸ್ಪೋಟಗೊಂಡಂತೆ ಕಾಣುತ್ತಿದೆ.
ಕನ್ನಡ ರಾಜ್ಯೋತ್ಸವಕ್ಕೆ ಕೌಂಟ್ ಡೌನ್: ಸರ್ಕಾರಿ ಅಧಿಕಾರಿಗಳ ಐಡಿ ಕಾರ್ಡ್ಗೆ ಕೆಂಪು-ಹಳದಿ ಬಣ್ಣದ ಟ್ಯಾಗ್ ಕಡ್ಡಾಯ!
ಉಪಚುನಾವಣೆ ಹಿನ್ನೆಲೆ, ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಒಟ್ಟು 40 ನಾಯಕರನ್ನು ಒಳಗೊಂಡ ಪಟ್ಟಿ ಇದಾಗಿದ್ದು, ಇದರಲ್ಲಿ ದೇವೇಗೌಡ, ಎಚ್ಡಿ ಕುಮಾರಸ್ವಾಮಿ ಸೇರಿದಂತೆ ಶಾಸಕರು, ಮಾಜಿ ಶಾಸಕ ಒಳಗೊಂಡಿದ್ದಾರೆ. ಆದ್ರೆ, ಅಚ್ಚರಿ ಅಂದರೆ ಈ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೋರ್ ಕಮಿಟಿ ಅಧ್ಯಕ್ಷರನ್ನೇ ಕೈಬಿಡಲಾಗಿದೆ. ಅಲ್ಲದೇ ಶಾಸಕ ಎಚ್ಡಿ ರೇವಣ್ಣ ಅವರಿಗೂ ಕೋಕ್ ನೀಡಲಾಗಿದೆ.
ಚನ್ನಪಟ್ಟಣ ಉಪ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಅವರು ಜೆಡಿಎಸ್ನಿಂದ ಸ್ಪರ್ಧೆ ಮಾಡುತ್ತಿದ್ದು ಈ ಸಂಬಂಧ ಪಕ್ಷ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್ ಮಾಡಿದೆ. ಆದರೆ ಈ ಪಟ್ಟಿಯಲ್ಲಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ ಹಾಗೂ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಹೆಸರನ್ನು ಕೈ ಬಿಡಲಾಗಿದೆ.
ಜೆಡಿಎಸ್ ಸ್ಟಾರ್ ಕ್ಯಾಂಪೇನರ್ಗಳ ಪಟ್ಟಿಯಲ್ಲಿ ಶಾಸಕರು, ಮಾಜಿ ಶಾಸಕರು, ಮಾಜಿ, ಹಾಲಿ ಸಂಸದರು, ಹಿರಿಯ ನಾಯಕರು, ಮಾಜಿ, ಹಾಲಿ ಎಂಎಲ್ಸಿಗಳು ಸೇರಿ ಒಟ್ಟು 40 ಪ್ರಚಾರಕರು ಹೆಸರು ಇದೆ. ಆದರೆ ಪಕ್ಷದ ಹಿರಿಯ ನಾಯಕ, ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ ಅವರ ಹೆಸರು ಪಟ್ಟಿಯಲ್ಲಿ ಇಲ್ಲ. ಇದಕ್ಕೆ ಬಲವಾದ ಕಾರಣವೂ ಸಹ ಇದೆ.