ಚಿನ್ನ, ಬೆಳ್ಳಿ ಬೆಲೆ ಆಗಾಗ್ಗೆ ಏರಿಕೆ – ಇಳಿಕೆಯಾಗುತ್ತಿರುತ್ತದೆ. ಷೇರು ಮಾರುಕಟ್ಟೆಯಲ್ಲಿ ಏರಿಕೆ – ಇಳಿಕೆಯ ಆಧಾರದ ಮೇಲೂ ಆಭರಣ ದರದಲ್ಲಿ ವ್ಯತ್ಯಾಸವಾಗುತ್ತಿರುತ್ತದೆ.
ಇಂದು ಬೆಂಗಳೂರಿನಲ್ಲಿ ಬಂಗಾರ, ಬೆಳ್ಳಿ ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ಆಭರಣ ದರ ಹೇಗಿದೆ ಎಂಬ ಬಗ್ಗೆ ತಿಳ್ಕೋಬೇಕಾ.. ಇಲ್ಲಿದೆ ವಿವರ..
ಇಂದು ದೇಶದಲ್ಲಿ ಬಂಗಾರದ ದರದಲ್ಲಿ ಹೆಚ್ಚಿದ್ದು, ಆದರೆ ಬೆಳ್ಳಿ ಬೆಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಇನ್ನು ಬೆಂಗಳೂರಲ್ಲಿ ಬೆಳ್ಳಿ ದರದಲ್ಲಿ ಇಳಿಕೆಯಾಗಿದೆ. ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ ನೋಡಿ..
ಒಂದು ಗ್ರಾಂ ಚಿನ್ನ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,770
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,295
ಎಂಟು ಗ್ರಾಂ ಚಿನ್ನ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 46,160
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 50,360
ಹತ್ತು ಗ್ರಾಂ ಚಿನ್ನ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 57,700
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 62,950
ನೂರು ಗ್ರಾಂ ಚಿನ್ನ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,77,000
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,29,500
ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 57,700 ಆಗಿದ್ದು ನಿನ್ನೆಗಿಂತ ಬೆಲೆ ಏರಿಕೆಯಾಗಿದೆ. ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 58,350, ರೂ. 57,700 ಹಾಗೂ 57,700 ರೂ. ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಚಿನ್ನದ ಬೆಲೆ ಶುಕ್ರವಾರ 57,850 ರೂ. ಆಗಿದ್ದು, ಬೆಲೆಯಲ್ಲಿ ಹೆಚ್ಚಾಗಿದೆ.
ಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ – ಇಳಿಕೆಯಾದಂತೆಯೂ ಚಿನ್ನ – ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ.
ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್
ದೇಶಾದ್ಯಂತ ಇಂದು ಬಂಗಾರದ ದರದಲ್ಲಿ ಹೆಚ್ಚಾಗಿದ್ದು, ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ.