ನವದೆಹಲಿ:- ಸಂಚಾರಿ ನಿಯಮಗಳನ್ನು ಉಲ್ಲಂಘನೆ ಮಾಡಿದ್ರೆ ಗಾಡಿ ಸೀಜ್ ಮಾಡಿ ದಂಡ ಕಟ್ಟೋದನ್ನ ನೋಡಿದ್ದೀವಿ. ಆದ್ರೆ ಇಲ್ಲಿ ಪೆಟ್ರೋಲ್, ಡೀಸೆಲ್ ಹಾಕಿಸಿದ್ರೆ ಗಾಡಿ ಸೀಜ್ ಹಾಗುತ್ತಂತೆ.
Champions Trophy: ಇಂಗ್ಲೆಂಡ್ ಮಣಿಸಿ ಸೆಮಿಫೈನಲ್ಗೆ ದಕ್ಷಿಣ ಆಫ್ರಿಕಾ ಎಂಟ್ರಿ!
ಹೌದು, ನಮ್ಮಲ್ಲಿ ಇತ್ತೀಚಿಗಂತೂ ವಾಯು ಮಾಲಿನ್ಯ (Air Pollution) ವಿಕೋಪಕ್ಕೆ ತಿರುಗಿದೆ. ಎಲ್ಲೆಡೆ ಮಿತಿಮೀರಿದ ವಾಹನಗಳ ಸಂಚಾರ, ಅತೀಯಾದ ಪ್ಲಾಸ್ಟಿಕ್ ಬಳಕೆ ಹಾಗೂ ಕಾಡು ನಾಶ ಇವುಗಳಿಂದ ಶುದ್ಧ ವಾತಾವರಣವೇ ಇಲ್ಲದಂತಾಗಿದೆ. ಆದ್ದರಿಂದ ಶುದ್ಧ ಗಾಳಿಗಾಗಿ ಜನರು ಪರಿತಪಿಸುವಂತಾಗಿದೆ. ಈ ರೀತಿಯ ಮಾಲಿನ್ಯದ ಗಾಳಿಗೆ ನಾವು ಒಳಗಾಗುತ್ತಿದ್ದೇವೆ. ಒಟ್ಟಿನಲ್ಲಿ ಶುದ್ಧ ಗಾಳಿಯ ಕೊರತೆ ನಮ್ಮೆಲ್ಲರನ್ನೂ ಕಾಡುತ್ತಿದೆ. ಇನ್ನೂ ದೆಹಲಿಯಲ್ಲಂತೂ ಕೆಲವರ್ಷಗಳಿಂದ ವಾಯು ಮಾಲಿನ್ಯವನ್ನು ನಿಯಂತ್ರಣವೇ ಮಾಡಲಾಗುತ್ತಿಲ್ಲ.
ಇದೀಗ ವಾಯು ಮಾಲಿನ್ಯವನ್ನು ಎದುರಿಸಲು ದೆಹಲಿ ಸರ್ಕಾರ ಪ್ರಮುಖ ಹೆಜ್ಜೆ ಇಟ್ಟಿದೆ. 15 ವರ್ಷಕ್ಕಿಂತ ಹಳೆಯದಾದ ವಾಹನಗಳಿಗೆ ಇನ್ಮುಂದೆ ಪೆಟ್ರೋಲ್, ಡೀಸೆಲ್ ನೀಡುವುದಿಲ್ಲ ಎಂದು ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ಶನಿವಾರ ಪ್ರಕಟಿಸಿದ್ದಾರೆ. ಇದು ವಾಹನ ಸವಾರರಿಗೆ ಸಂಕಷ್ಟ ತಂದಿದೆ.
ಮಾರ್ಚ್ 31 ರ ನಂತರ ಈ ನಿಯಮ ಜಾರಿಗೆ ಬರಲಿದೆ. ವಾಯುಮಾಲಿನ್ಯ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ನಗರದಾದ್ಯಂತ ಪೆಟ್ರೋಲ್ ಬಂಕ್ಗಳಲ್ಲಿ 15 ವರ್ಷಕ್ಕಿಂತ ಹಳೆಯ ವಾಹನಗಳಿಗೆ ಪೆಟ್ರೋಲ್ ನೀಡುವುದನ್ನು ಸರ್ಕಾರ ನಿಲ್ಲಿಸಲಿದೆ ಎಂದರು.
ಪೆಟ್ರೋಲ್ ಬಂಕ್ಗಳಲ್ಲಿ ಹಳೆಯ ವಾಹನಗಳಿಗೆ ಇಂಧನ ತುಂಬಿಸುವಂತಿಲ್ಲ. ಹಳೆಯ ವಾಹನಗಳನ್ನು ಗುರುತಿಸಲು ವಿಶೇಷ ತಂಡ ರಚನೆ ಮಾಡಲಾಗುವುದು. ಮಾಲಿನ್ಯ ನಿಯಂತ್ರಣಕ್ಕೆ ಹೋಟೆಲ್ಗಳಲ್ಲಿ ಹೊಗೆ ನಿರೋಧಕ ಅಳವಡಿಕೆ ಕಡ್ಡಾಯ ಎಂದು ಹೇಳಿದ್ದಾರೆ.
2025 ರ ಡಿಸೆಂಬರ್ ವೇಳೆಗೆ ದೆಹಲಿಯಲ್ಲಿ ಸುಮಾರು ಶೇ.90 ರಷ್ಟು ಸಾರ್ವಜನಿಕ ಸಿಎನ್ಜಿ ಬಸ್ಗಳನ್ನು ಹಂತಹಂತವಾಗಿ ಸ್ಥಗಿತಗೊಳಿಸಲಾಗುವುದು. ಸ್ವಚ್ಛ ಮತ್ತು ಸುಸ್ಥಿರ ಸಾರ್ವಜನಿಕ ಸಾರಿಗೆಯತ್ತ ಸರ್ಕಾರದ ಒತ್ತು ನೀಡುವ ಭಾಗವಾಗಿ ಎಲೆಕ್ಟ್ರಿಕ್ ಬಸ್ಗಳಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದ್ದಾರೆ.