ಬೆಂಗಳೂರು: ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದ ಬಸ್ ಪ್ರಯಾಣ ದರಗಳನ್ನು ಶೇಕಡಾ 15 ರಷ್ಟು ಏರಿಸಲು ಅನುಮೋದನೆ ನೀಡಿದೆ. ಶಕ್ತಿ ಯೋಜನೆ, ಡೀಸೆಲ್ ದರ ಏರಿಕೆ ಸೇರಿದಂತೆ ಇತ್ಯಾದಿ ಕಾರಣಗಳಿಂದ ನಷ್ಟಕ್ಕೆ ಸಿಲುಕಿರುವ ಸರ್ಕಾರ ಈಗ ಕೊನೆಗೆ ಅನಿವಾರ್ಯವಾಗಿ ಪ್ರಯಾಣ ದರವನ್ನು ಏರಿಕೆ ಮಾಡಲು ಮುಂದಾಗಿದೆ.
100, 200, 500 ರೂಪಾಯಿಗಳ ನೋಟು ಅಸಲಿಯೋ? ನಕಲಿಯೋ? ಪತ್ತೆ ಹಚ್ಚುವ ವಿಧಾನಗಳು ಇಲ್ಲಿದೆ ನೋಡಿ
ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದ ನಾಲ್ಕು ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಶೇಕಡಾ 15ರಷ್ಟು ಏರಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಸಚಿವ ಸಂಪುಟ ಸಭೆ ಬಳಿಕ ಸರ್ಕಾರ ಅಧಿಕೃತವಾಗಿ ಘೋಷಿಸುವ ಸಾಧ್ಯತೆ ಇದೆ. ಈಗಾಗಲೇ ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಆಗಸ್ಟ್ನಲ್ಲಿ ನಾಲ್ಕು ಸಾರಿಗೆ ನಿಗಮಗಳು ಪ್ರಸ್ತಾವನೆ ಸಲ್ಲಿಸಿದ್ದವು. ಅದರ ಬೆನ್ನಲ್ಲೇ ಇಂದು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
- ಬಿಎಂಟಿಸಿ: ಈ ವರ್ಷ ಆಗಸ್ಟ್ನಲ್ಲಿ ಶೇಕಡಾ 42 ರಷ್ಟು ಟಿಕೆಟ್ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. 2014 ರಲ್ಲಿ ಟಿಕೆಟ್ ದರ ಹೆಚ್ಚಳ ಆಗಿತ್ತು ಮತ್ತೆ ಹೆಚ್ಚಳ ಆಗಿರಲಿಲ್ಲ.
- ಕೆಎಸ್ಆರ್ಟಿಸಿ: ಶೇಕಡಾ 25 ರಿಂದ 30 ರಷ್ಟು ಟಿಕೆಟ್ ದರ ಹೆಚ್ಚಳಕ್ಕೆ ಆಗಸ್ಟ್ನಲ್ಲಿ ಪ್ರಸ್ತಾವನೆ ಸಲ್ಲಿಸಿತ್ತು. 2020ರ ಫೆಬ್ರುವರಿಯಲ್ಲಿ ಕೆಎಸ್ಆರ್ಟಿಸಿ ಟಿಕೆಟ್ ದರ ಹೆಚ್ಚಳ ಮಾಡಲಾಗಿತ್ತು, ಬಳಿಕ ಮತ್ತೆ ಹೆಚ್ಚಳ ಮಾಡಿಲ್ಲ.
- ಕೆಡಬ್ಲ್ಯೂಆರ್ಟಿಸಿ: ಶೇಕಡಾ 30 ರಷ್ಟು ಟಿಕೆಟ್ ದರ ಹೆಚ್ಚಳಕ್ಕೆ ಆಗಸ್ಟ್ನಲ್ಲಿ ಪ್ರಸ್ತಾವನೆ ಸಲ್ಲಿಸಿತ್ತು. 2020 ರ ಫೆಬ್ರುವರಿಯಲ್ಲಿ ಕೊನೆಯದಾಗಿ ಕೆಡಬ್ಲ್ಯೂಆರ್ಟಿಸಿ ಟಿಕೆಟ್ ದರ ಹೆಚ್ಚಳ ಮಾಡಲಾಗಿತ್ತು.
- ಕೆಕೆಆರ್ಟಿಸಿ: ಶೇಕಡಾ 25 ರಿಂದ 30 ರಷ್ಟು ಟಿಕೆಟ್ ದರ ಹೆಚ್ಚಳಕ್ಕೆ ಆಗಸ್ಟ್ನಲ್ಲೇ ಪ್ರಸ್ತಾವನೆ ಸಲ್ಲಿಸಿತ್ತು. 2020ರ ಫೆಬ್ರುವರಿಯಲ್ಲಿ ಕೆಕೆಆರ್ಟಿಸಿ ಟಿಕೆಟ್ ದರ ಹೆಚ್ಚಳ ಮಾಡಿದ್ದು ಬಿಟ್ಟರೆ ಮತ್ತೆ ಮಾಡಿಲ್ಲ.
ಸದ್ಯ ರಾಜ್ಯದಲ್ಲಿ ಡಿಸೇಲ್ ಬೆಲೆ 88.99 ರೂ. ಇದ್ದ, 2020 ರಲ್ಲಿ ರಾಜ್ಯದಲ್ಲಿ 68 ರೂ ಡಿಸೇಲ್ ಇತ್ತು. ಅದು 2014 ರಲ್ಲಿ ರಾಜ್ಯದಲ್ಲಿ 54 ರಿಂದ 55 ರೂ. ಇತ್ತು.