ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳಿಗೆ ಬಿಗ್ ಶಾಕ್ ಎದುರಾಗಿದೆ.
ದೇಶದ ಒಬ್ಬ ಪ್ರಮುಖ ವ್ಯಕ್ತಿ ದಸರಾ ಮುಖ್ಯ ಅತಿಥಿಯಾಗಿ ಬರುತ್ತಾರೆ: ಸಚಿವ ಎಚ್ ಕೆ ಪಾಟೀಲ್
ಐಪಿಎಲ್ ಮೆಗಾ ಹರಾಜಿಗೂ ಮುನ್ನವೇ ಆರ್ಸಿಬಿ ಇಬ್ಬರು ವಿದೇಶಿ ಆಟಗಾರರನ್ನು ಕೈ ಬಿಡುವ ಸಾಧ್ಯತೆಯಿದೆ. ನಾಯಕ ಫಾಫ್ ಡು ಪ್ಲೆಸಿಸ್ ಮತ್ತು ಗ್ಲೆನ್ ಮ್ಯಾಕ್ಸ್ವೆಲ್ ಅವರನ್ನು ತಂಡದಿಂದ ಕೈಬಿಡಲು ನಿರ್ಧರಿಸಿದ್ದು, ಆರ್ಸಿಬಿ ಫ್ಯಾನ್ಸ್ಗೆ ಆಘಾತ ನೀಡಿದೆ.
ಕಳೆದ ಐಪಿಎಲ್ನಲ್ಲಿ ಫಾಫ್ ಬ್ಯಾಟಿಂಗ್ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಆದರೆ ಮ್ಯಾಕ್ಸ್ವೆಲ್ ನಿರೀಕ್ಷೆಯ ಪ್ರಕಾರ ಪ್ರದರ್ಶನ ನೀಡಿರಲಿಲ್ಲ. ಅವರು ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಭಾರಿ ವಿಫಲರಾದರು. ಆದರೂ ತಂಡದ ಯಶಸ್ಸಿನಲ್ಲಿ ಇಬ್ಬರೂ ನಿರ್ಣಾಯಕ ಪಾತ್ರವನ್ನು ವಹಿಸಿದ್ದರು.
ಇಬ್ಬರು ಆಟಗಾರರ ಕೈಬಿಟ್ಟ ಬಳಿಕ ತಂಡಕ್ಕೆ ಕೆ.ಎಲ್ ರಾಹುಲ್ ಸೇರ್ಪಡೆಯಾಗಬಹುದು ಎಂದು ವರದಿ ಪ್ರಕಟವಾಗಿದ್ದರೂ ಹರಾಜು ನಡೆಯುವ ವೇಳೆ ಅಧಿಕೃತವಾಗಿ ತಿಳಿದು ಬರಲಿದೆ.