ಬಹುನಿರೀಕ್ಷಿತ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಕ್ಷಣಗಣನೆ ಶುರುವಾಗಿದೆ. ಮಹತ್ವದ ಟೂರ್ನಿಗೆ ಎಲ್ಲಾ ರೀತಿಯ ತಯಾರಿ ನಡೆದಿದೆ. ಜತೆಗೆ ಚಾಂಪಿಯನ್ಸ್ ಟ್ರೋಫಿಗೆ ಬಲಿಷ್ಠ ತಂಡಗಳು ಪ್ರಕಟವಾಗುತ್ತಿವೆ. ಈಗಾಗಲೇ ಇಂಗ್ಲೆಂಡ್ ತಂಡ ಕೂಡ ಪ್ರಕಟ ಆಗಿದೆ.
ನನ್ನ ವಿರುದ್ಧ ಭ್ರಷ್ಟಾಚಾರ ಸಾಬೀತು ಮಾಡಿದ್ರೆ ರಾಜೀನಾಮೆ ಕೊಡ್ತೀನಿ: ಶಾಸಕ ಯತ್ನಾಳ್ ಗೆ GT ದೇವೇಗೌಡ ಸವಾಲ್!
ಇನ್ನೂ 2025ರ IPL ಆರಂಭಕ್ಕೂ ಮುನ್ನ RCBಗೆ ಫಿಲ್ ಸಾಲ್ಟ್ ಬಿಗ್ ಶಾಕ್ ಕೊಟ್ಟಿದ್ದಾರೆ. ಇಂದು ಕೋಲ್ಕತ್ತಾದ ಈಡನ್ ಗಾರ್ಡನ್ ಇಂಟರ್ ನ್ಯಾಷನಲ್ ಸ್ಟೇಡಿಯಮ್ನಲ್ಲಿ ಟೀಮ್ ಇಂಡಿಯಾ, ಇಂಗ್ಲೆಂಡ್ ನಡುವಿನ ಮೊದಲ ಪಂದ್ಯ ನಡೆಯುತ್ತಿದೆ. ಟಾಸ್ ಗೆದ್ದ ಟೀಮ್ ಇಂಡಿಯಾದ ಕ್ಯಾಪ್ಟನ್ ಸೂರ್ಯಕುಮಾರ್ ಯಾದವ್ ಅವರು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಜೋಸ್ ಬಟ್ಲರ್ ನೇತೃತ್ವದ ಇಂಗ್ಲೆಂಡ್ ಫಸ್ಟ್ ಬ್ಯಾಟಿಂಗ್ ಮಾಡುತ್ತಿದೆ.
ಇಂಗ್ಲೆಂಡ್ ತಂಡದ ಪರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಫೋಟಕ ಬ್ಯಾಟರ್ ಫಿಲ್ ಸಾಲ್ಟ್ ಓಪನಿಂಗ್ ಮಾಡಲು ಬಂದರು. ಮೊದಲ ಓವರ್ನಲ್ಲೇ ಅರ್ಷ್ದೀಪ್ ಬೌಲಿಂಗ್ನಲ್ಲಿ ಫಿಲ್ ಸಾಲ್ಟ್ ವಿಕೆಟ್ ಒಪ್ಪಿಸಿದ್ದಾರೆ.
ಫಿಲ್ ಸಾಲ್ಟ್ ಬ್ಯಾಟಿಂಗ್ ಮೇಲೆ ಆರ್ಸಿಬಿ ಫ್ಯಾನ್ಸ್ಗೆ ಬಹಳ ನಿರೀಕ್ಷೆ ಇತ್ತು. ಅರ್ಷ್ದೀಪ್ ಎಸೆದ ಮೊದಲ ಓವರ್ನ ಮೊದಲ ಎರಡು ಬಾಲ್ ಡಿಫೆನ್ಸ್ ಆಡಿದ ಫಿಲ್ ಸಾಲ್ಟ್ 3ನೇ ಬಾಲ್ಗೆ ಬೌಂಡರಿ ಬಾರಿಸಲು ಹೋಗಿ ಕ್ಯಾಚ್ ನೀಡಿದರು. ಈ ಮೂಲಕ ಆರ್ಸಿಬಿ ಅಭಿಮಾನಿಗಳ ನಿರೀಕ್ಷೆಗೆ ತಣ್ಣೀರೆರಚಿದರು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಸ್ಥಾನ ಪಡೆದಿರೋ ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್ ಫಿಲ್ ಸಾಲ್ಟ್ ಸ್ಫೋಟಕ ಬ್ಯಾಟಿಂಗ್ಗೆ ಹೆಸರು ವಾಸಿಯಾಗಿದ್ದಾರೆ. ಇತ್ತೀಚೆಗೆ ಸೌದಿಯಲ್ಲಿ ನಡೆದ ಐಪಿಎಲ್ ಮೆಗಾ ಹರಾಜಿನಲ್ಲಿ ಫಿಲ್ ಸಾಲ್ಟ್ ಅವರನ್ನು ಆರ್ಸಿಬಿ ಭಾರೀ ಮೊತ್ತ ನೀಡಿ ಖರೀದಿ ಮಾಡಿದೆ.