ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಫ್ರೌಡಶಾಲೆ ಶಿಕ್ಷಕರಿಗೆ ರಾಜ್ಯ ಶಿಕ್ಷಣ ಇಲಾಖೆ ಬಿಗ್ ಶಾಕ್ ನೀಡಿದೆ. ಕರ್ನಾಟಕ ಆಡಳಿತ ನ್ಯಾಯ ಮಂಡಳಿ ಪ್ರೌಢಶಾಲೆ ಶಿಕ್ಷಕರ ವರ್ಗಾವಣೆಗೆ ತಡೆಯಾಜ್ಞೆ ನೀಡಿದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಕೌನ್ಸೆಲಿಂಗ್ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ ಎಂದು ಹೇಳಲಾಗಿದೆ. ಡಿಸೆಂಬರ್ 24 ರಿಂದ 2022 ರ ಜನವರಿ 10 ರವರೆಗೆ 2020-21 ನೇ ಸಾಲಿನ ಸರ್ಕಾರಿ,
ಪ್ರೌಢಶಾಲೆ ಸಹಶಿಕ್ಷಕರ ವಿಭಾಗದ ಹೊರಗಿನ ಕೋರಿಕೆ ವರ್ಗಾವಣೆ ಕೌನ್ಸಿಲಿಂಗ್ ನಡೆಸಬೇಕಿತ್ತು. ಕರ್ನಾಟಕ ಆಡಳಿತ ನ್ಯಾಯ ಮಂಡಳಿ ಮೈಸೂರು ವಿಭಾಗದ ಒಳಗಿನ ಕೋರಿಕೆ ವರ್ಗಾವಣೆಗೆ ತಡೆಯಾಜ್ಞೆ ನೀಡಿರುವುದರಿಂದ ತಾತ್ಕಾಲಿಕವಾಗಿ ವರ್ಗಾವಣೆ ಮುಂದೂಡಲಾಗಿದೆ. ಕೌನ್ಸೆಲೀಗ್ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸುವುದಾಗಿ ತನ್ನ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
