ನ್ಯೂಜಿಲೆಂಡ್ ತಂಡದ ವೇಗಿ ನೀಲ್ ವ್ಯಾಗ್ನರ್ ಅವರು ಕ್ರಿಕೆಟ್ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ ಮಂಗಳವಾರ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಹಠಾತ್ ವಿದಾಯ ಹೇಳಿದ್ದಾರೆ. ಆ ಮೂಲಕ ತಮ್ಮ 12 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವೃತ್ತಿ ಜೀವನವನ್ನು ಅಂತ್ಯಗೊಳಿಸಿದ್ದಾರೆ.
ತೊಡೆಸಂದು ಗಾಯದ ಚಿಕಿತ್ಸೆಗಾಗಿ ವಿದೇಶಕ್ಕೆ ಹಾರಲಿರುವ ಕೆಎಲ್ ರಾಹುಲ್: ಐಪಿಎಲ್ಗೆ ಡೌಟ್?
![Demo](https://ainlivenews.com/wp-content/uploads/2023/12/spoorthi-1.jpg)
ಆಸ್ಟ್ರೇಲಿಯಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ನೀಲ್ ವ್ಯಾಗ್ನರ್ ಅವರನ್ನು ಆಯ್ಕೆ ಮಾಡಲಾಗಿತ್ತು. ಆದರೆ, ವೆಲ್ಲಿಂಗ್ಟನ್ನಲ್ಲಿ ಫೆಬ್ರವರಿ 29 ರಂದು ಆರಂಭವಾಗಲಿರುವ ಮೊದಲನೇ ಟೆಸ್ಟ್ ಪಂದ್ಯದ ಕಿವೀಸ್ ಪ್ಲೇಯಿಂಗ್ XIನಲ್ಲಿ ಇವರನ್ನು ಆಡಿಸಲಾಗುತ್ತಿಲ್ಲ ಎಂಬ ವಿಷಯ ಬಹಿರಂಗವಾಗಿದೆ. ಕ್ರೈಸ್ಟ್ ಚರ್ಚ್ನಲ್ಲಿ ನಡೆಯುವ ಎರಡನೇ ಟೆಸ್ಟ್ನಿಂದಲೂ ಅವರನ್ನು ಬಿಡುಗಡೆಗೊಳಿಸಲಾಗಿದೆ ಎಂದು ಹೇಳಲಾಗುತ್ತಿದೆ
![](https://ainlivenews.com/wp-content/uploads/2024/01/Ad-Banner-copy-scaled.jpg)