ಬೆಂಗಳೂರು:- ರೈತನಿಗೆ ಬಿಗ್ ಶಾಕ್ ಎದುರಾಗಿದ್ದು, ಈರುಳ್ಳಿ ಬೆಲೆ ದಿಢೀರ್ ಕುಸಿತ ಹಿನ್ನೆಲೆ, ರೈತ ಕಣ್ಣೀರು ಹಾರುವಂತಾಗಿದೆ.
ಪಿಂಚಣಿದಾರರಿಗೆ ಗುಡ್ ನ್ಯೂಸ್: ಇನ್ನುಂದೆ ಮನೆಯಿಂದಲೇ “ಡಿಜಿಟಲ್ ಜೀವನ ಪ್ರಮಾಣ ಪತ್ರ” ಪಡೆಯಿರಿ!
ಏಕಾಏಕಿ ಬಿಟ್ಟೂ ಬಿಡದಂತೆ ಸುರಿದ ಮಳೆ ರಾಜ್ಯಾದ್ಯಂತ ಆತಂಕವನ್ನೇ ಸೃಷ್ಟಿಸಿತ್ತು. ಇದರ ಪರಿಣಾಮದಿಂದ ಚಿತ್ರದುರ್ಗ, ಬಾಗಲಕೋಟೆ, ಗದಗ, ಬೆಳಗಾವಿ, ಧಾರವಾಡ ಜಿಲ್ಲೆಗಳ ಸಾವಿರಾರು ಹೆಕ್ಟೇರ್ ಪ್ರದೇಶಗಳಲ್ಲಿ ಬೆಳೆದಿದ್ದ ಈರುಳ್ಳಿ ಬೆಳೆ ಸರ್ವನಾಶವಾಗಿದೆ.
ಕೋಟೆನಾಡು ಚಿತ್ರದುರ್ಗದಲ್ಲಿ ಮಳೆಗೆ ಕೆರೆ ಕಟ್ಟೆಗಳು ತುಂಬಿ ಹರಿದು, ಜಿಲ್ಲೆಯ ಹಲವು ಕಡೆಗಳಲ್ಲಿ ಜಮೀನುಗಳು ಸಂಪೂರ್ಣ ಜಲಾವೃತಗೊಂಡಿದ್ದವು. ಇದರಿಂದಾಗಿ ಅಪಾರ ಪ್ರಮಾಣದ ಈರುಳ್ಳಿ ಬೆಳೆ ಸರ್ವನಾಶವಾಗಿತ್ತು. ಸಚಿವ ಕೃಷ್ಣ ಬೈರೇಗೌಡ ಬೆಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.
ಈರುಳ್ಳಿ ಬೆಳೆ ಬೆಳೆಯಲು ಎಕರೆಗೆ 80 ಸಾವಿರದಿಂದ 1 ಲಕ್ಷ ರೂಪಾಯಿವರೆಗೆ ಖರ್ಚಾಗುತ್ತದೆ. ಸಾಲಶೂಲ ಮಾಡಿ ಈರುಳ್ಳಿ ಬೆಳೆದು ಈಗ ಲಕ್ಷ ಲಕ್ಷ ನಷ್ಟ ಅನುಭವಿಸುವಂತಾಗಿದೆ ಎಂದು ರೈತ ಶ್ರೀಧರ್ ರೆಡ್ಡಿ ಅಳಲು ತೋಡಿಕೊಂಡಿದ್ದಾರೆ.
ಗದಗ ಜಿಲ್ಲೆಯಲ್ಲಿ ಈ ಬಾರಿ 14 ಸಾವಿರಕ್ಕೂ ಅಧಿಕ ಪ್ರದೇಶಗಳಲ್ಲಿ ಈರುಳ್ಳಿ ಬಿತ್ತನೆ ಮಾಡಲಾಗಿತ್ತು. ಆದರೆ ವರುಣನ ಆರ್ಭಟಕ್ಕೆ ಸುಮಾರು 4 ಸಾವಿರ ಹೆಕ್ಟೇರ್ ಪ್ರದೇಶದ ಈರುಳ್ಳಿ ಬೆಳೆ ಸಂಪೂರ್ಣ ಸರ್ವನಾಶವಾಗಿದೆ. ಒಂದೆಡೆ, ಬೆಳೆ ಹಾನಿಯಾದರೆ ಮತ್ತೊಂದೆಡೆ ದಿಢೀರ್ ಬೆಲೆ ಕುಸಿತ ರೈತರನ್ನು ಜರ್ಜರಿತರನ್ನಾಗಿಸಿದೆ. ಕೇವಲ ನಾಲ್ಕು ದಿನದ ಹಿಂದೆ ಒಂದು ಕ್ವಿಂಟಲ್ ಈರುಳ್ಳಿ ಬೆಲೆ 4 ಸಾವಿರ ರೂ. ಇತ್ತು. ಈಗ ದಿಢೀರ್ 2 ಸಾವಿರ ರೂಪಾಯಿಗೆ ಕುಸಿದಿದೆ.
ಪ್ರತಿ ಕೆಜಿ ಈರುಳ್ಳಿಗೆ ಮಾರುಕಟ್ಟೆಯಲ್ಲಿ 60 ರಿಂದ 65 ರೂಪಾಯಿ ಇದ್ದರೂ ಯಾಕಿಷ್ಟು ಕಡಿಮೆ ಬೆಲೆಗೆ ಈರುಳ್ಳಿ ಖರೀದಿ ಮಾಡುತ್ತೀರಿ ಎಂದು ರೈತರು ಆಕ್ರೋಶ ಹೊರಹಾಕಿದರು.