ಟೀಮ್ ಇಂಡಿಯಾ ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿ ಒಂದು ಹೊರ ಬಿದ್ದಿದ್ದು, ಸ್ಟಾರ್ ವಿಕೆಟ್ ಕೀಪರ್ ದಿಢೀರ್ ನಿವೃತ್ತಿ ಘೋಷಣೆ ಮಾಡಿದ್ದಾರೆ.
ಟೀಮ್ ಇಂಡಿಯಾ ಆಟಗಾರ ವೃದ್ಧಿಮಾನ್ ಸಾಹ ಎಲ್ಲಾ ಮಾದರಿಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಪ್ರಸ್ತುತ ನಡೆಯುತ್ತಿರುವ ರಣಜಿ ಟೂರ್ನಿಯಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ಬಂಗಾಳ ಪರ ಕಣಕ್ಕಿಳಿದಿರುವ ಸಾಹ ದಿಢೀರ್ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದಾರೆ.
ಈ ಮೂಲಕ 17 ವರ್ಷಗಳ ಸುದೀರ್ಘ ವೃತ್ತಿಜೀವನವನ್ನು ಕೊನೆಗೊಳಿಸಲು ವೃದ್ಧಿಮಾನ್ ಸಾಹ ನಿರ್ಧರಿಸಿದ್ದಾರೆ. ತಮ್ಮ 17 ವರ್ಷಗಳ ವೃತ್ತಿಜೀವನದಲ್ಲಿ ಸಾಹ 15 ವರ್ಷಗಳ ಕಾಲ ಬಂಗಾಳ ಪರವಾಗಿ ಮತ್ತು 2 ವರ್ಷಗಳ ಕಾಲ ತ್ರಿಪುರಾ ಪರ ದೇಶೀಯ ಕ್ರಿಕೆಟ್ ಆಡಿದ್ದಾರೆ.
ಇನ್ನು 2010 ರಲ್ಲಿ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡಿದ್ದ ವೃದ್ಧಿಮಾನ್ ಸಾಹ 40 ಟೆಸ್ಟ್ ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ವೇಳೆ 56 ಇನಿಂಗ್ಸ್ ಆಡಿರುವ ಅವರು 3 ಶತಕ ಹಾಗೂ 6 ಅರ್ಧಶತಕಗಳೊಂದಿಗೆ ಒಟ್ಟು 1353 ರನ್ ಕಲೆಹಾಕಿದ್ದಾರೆ.
ಹಾಗೆಯೇ ಭಾರತದ ಪರ 9 ಏಕದಿನ ಪಂದ್ಯಗಳಲ್ಲೂ ವಿಕೆಟ್ ಕೀಪರ್ ಆಗಿ ಕಣಕ್ಕಿಳಿದಿರುವ ಸಾಹ ಕೇವಲ 41 ರನ್ಗಳಿಸಲಷ್ಟೇ ಶಕ್ತರಾಗಿದ್ದರು