ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯತ ಸದಸ್ಯರಾಗಿದ್ದ ಭಾರತೀಯ ಜನತಾ ಪಕ್ಷದ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ ಸಿಕ್ಕಿದೆ. ಹೌದು ಧಾರವಾಡದ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಬಸವರಾಜ ಮುತ್ತಗಿ ತಪ್ಪೊಪ್ಪಿಗೆ ನೀಡಿದ್ದು, ಶಾಸಕ ವಿನಯ್ ಕುಲಕರ್ಣಿ ಅವರ ಪಾತ್ರವನ್ನು ಬಹಿರಂಗಪಡಿಸಿದೆ.
ಮುತ್ತಗಿ ತನ್ನ ಹೇಳಿಕೆಯಲ್ಲಿ, ಕೊಲೆಗೆ ಬೆಂಗಳೂರಿನ ಹುಡುಗರನ್ನು ಬಳಸಿಕೊಳ್ಳಲಾಗಿದೆ. ಧಾರವಾಡದ ಹುಡುಗರು ಹತ್ಯೆಗೆ ನಿರಾಕರಿಸಿದ್ದರಿಂದ ಬೆಂಗಳೂರಿನಿಂದ ಹುಡುಗರನ್ನು ಕರೆಸಲಾಗಿದೆ ಎಂದೂ ಹೇಳಿದ್ದಾರೆ. 20 ಲಕ್ಷ ರೂಪಾಯಿ ಸುಪಾರಿ ನೀಡಲಾಗಿದೆ ಎಂಬುದನ್ನು ಒಪ್ಪಿಕೊಂಡಿದ್ದಾರೆ.
ದಾಲ್ಚಿನ್ನಿ ಎಲೆ ಅಡುಗೆಗೆ ಮಾತ್ರವಲ್ಲ ದೇಹಕ್ಕೂ ನೀಡುತ್ತದೆ ಆರೋಗ್ಯಕಾರಿ ಪ್ರಯೋಜಗಳು!
ವಿನಯ್ ಕುಲಕರ್ಣಿ ಆಪ್ತನಾಗಿದ್ದ ಬಸವರಾಜ ಮುತ್ತಗಿ ಜನ ಪ್ರತಿನಿಧಿ ನ್ಯಾಯಾಲಯದಲ್ಲಿ ನೀಡಿರುವ ತಪ್ಪೊಪ್ಪಿಗೆ ವಿನಯ್ ಕುಲಕರ್ಣಿ ಪಾತ್ರದ ಕುರಿತು ವಿಸ್ತ್ರತವಾಗಿ ಮಾಹಿತಿ ನೀಡಿದ್ದಾರೆ. ಈ ಹೇಳಿಕೆಯಿಂದ ವಿನಯ್ ಕುಲಕರ್ಣಿ ಮೇಲಿನ ಕಾನೂನು ಕುಣಿಕೆ ಮತ್ತಷ್ಟು ಬಿಗಿಯಾಗುವ ಸಾಧ್ಯತೆಯಿದೆ.
ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ನೀಡಿರುವ ತಪ್ಪೊಪ್ಪಿಗೆ ಹೇಳಿಕೆಯಲ್ಲಿ ವಿನಯ್ ಕುಲಕರ್ಣಿ ಪಾತ್ರದ ಕುರಿತು ಬಸವರಾಜ ಮುತ್ತಗಿ ವಿಸ್ತ್ರತವಾಗಿ ಮಾಹಿತಿ ನೀಡಿದ್ದಾರೆ. ಯೋಗೇಶ್ ಗೌಡ ಹತ್ಯೆಗೆ ಧಾರವಾಡದ ಯುವಕರು ಒಪ್ಪಿಗೆ ಸೂಚಿಸಲಿಲ್ಲ. ಹೀಗಾಗಿ, ಶಾಸಕ ವಿನಯ್ ಕುಲಕರ್ಣಿ ಸೂಚನೆ ಮೇರೆಗೆ ಬೆಂಗಳೂರಿನಿಂದ ಕರೆಸಿ ಸಂಚು ರೂಪಿಸಿ ಯೋಗೀಶ್ ಗೌಡನನ್ನು ಕೊಲೆ ಮಾಡಲಾಗಿದೆ ಎಂದು ಮುತ್ತಿಗೆ ಹೇಳಿಕೆ ನೀಡಿದ್ದಾರೆ.