ದರ್ಶನ್ (Darshan) ನಟನೆಯ ಕಾಟೇರ ಸಿನಿಮಾದ ಪ್ರಿ ರಿಲೀಸ್ ಇವೆಂಟ್ (Pre Release Event) ಇಂದು ಮಂಡ್ಯದಲ್ಲಿ (Mandya )ಅದ್ಧೂರಿಯಾಗಿ ನಡೆಯಲಿದೆ. ಇಂದು ರೈತದಿನ ಆಗಿದ್ದರಿಂದ ಈ ಕಾರ್ಯಕ್ರಮದಲ್ಲಿ ರೈತಗೀತೆಯನ್ನು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿದೆ. ಸಾವಿರಾರು ಸಂಖ್ಯೆಯಲ್ಲಿ ಇಂದು ದರ್ಶನ್ ಅಭಿಮಾನಿಗಳು ಮಂಡ್ಯದಲ್ಲಿ ಸೇರಲಿದ್ದಾರೆ.
ಮೊನ್ನೆಯಷ್ಟೇ ಕಾಟೇರ (Katera) ಸಿನಿಮಾದ ಟ್ರೈಲರ್ ರಿಲೀಸ್ ಆಗಿದೆ. ಅದ್ಭುತ ಪ್ರತಿಕ್ರಿಯೆ ಕೂಡ ವ್ಯಕ್ತವಾಗಿದೆ. ಹುಬ್ಬಳ್ಳಿಯಲ್ಲಿ ನಡೆದ ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ದರ್ಶನ್ ಸಿನಿಮಾ ಕುರಿತಾದ ಹಲವು ಸಂಗತಿಗಳನ್ನು ಹಂಚಿಕೊಂಡಿದ್ದಾರೆ. ಈ ಸಿನಿಮಾದ ಕಥೆಯು ನೈಜ ಘಟನೆಯನ್ನು ಆಧರಿಸಿದ್ದು, ಅದು ಇಂದಿರಾ ಗಾಂಧಿ (Indira Gandhi) ಕಾಲದ ಕಥೆಯಾಗಿದೆ ಎಂದು ಗುಟ್ಟು ಬಿಟ್ಟುಕೊಟ್ಟಿದ್ದಾರೆ.
ರಾಕ್ಲೈನ್ ವೆಂಕಟೇಶ್ ನಿರ್ಮಾಣದ, ತರುಣ್ ಸುದೀರ್ ನಿರ್ದೇಶನದ ಕಾಟೇರ ಚಿತ್ರ ಇದೇ ತಿಂಗಳು 29ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ. ನಟ ದರ್ಶನರ ಬಹು ನಿರೀಕ್ಷಿತ ಚಿತ್ರ ಇದಾಗಿದ್ದು, ಈಗಾಗಲೇ ಚಿತ್ರ ಭಾರೀ ಹೈಪ್ ಕ್ರಿಯೆಟ್ ಮಾಡಿದೆ. ಬಹಳ ದಿನಗಳ ಬಳಿಕ ಡಿ ಬಾಸ್ ಮಾಸ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಟೀಸರ್ ಮತ್ತು ಸಾಂಗ್ ಯೂಟ್ಯೂಬ್ನಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿದೆ. ಚಿತ್ರ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಈ ನಡುವೆ ವಾಣಿಜ್ಯ ನಗರಿಯಲ್ಲಿ ಅದ್ಧೂರಿಯಾಗಿ ಟ್ರೈಲರ್ ಬಿಡುಗಡೆಗೊಳಿಸಲಾಗಿದೆ.