‘ಬಿಗ್ ಬಾಸ್’ ಕನ್ನಡ 6ರ ಸ್ಪರ್ಧಿ ಸೋನು ಪಾಟೀಲ್ (Sonu Patil) ಅವರು ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ನಟಿ ಸೋನು ವೈವಾಹಿಕ (Wedding) ಜೀವನಕ್ಕೆ ಕಾಲಿಟ್ಟಿದ್ದಾರೆ. ಹೊಸ ಬಾಳಿಗೆ ಕಾಲಿಟ್ಟಿರುವ ನವಜೋಡಿಗೆ ಅಭಿಮಾನಿಗಳು ಶುಭಕೋರುತ್ತಿದ್ದಾರೆ.
‘ಬಿಗ್ ಬಾಸ್’ ಕನ್ನಡ ಶೋ ಮೂಲಕ ಕನ್ನಡಿಗರಿಗೆ ಪರಿಚಿತರಾದ ಸೋನು ಪಾಟೀಲ್ ಇದೀಗ ಸಂಕೇತ್ (Sanketh) ಎಂಬುವವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಗುರುಹಿರಿಯರ ಸಮ್ಮುಖದಲ್ಲಿ ಸರಳವಾಗಿ ಈ ಮದುವೆ ಜರುಗಿದೆ.
ಸೋನು ಅವರ ಹುಡುಗ ಯಾರು? ಏನು ಮಾಡ್ತಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಇಲ್ಲ. ಅರೇಂಜ್ ಮ್ಯಾರೇಜ್ ಅಥವಾ ಲವ್ ಮ್ಯಾರೇಜ್ ಎಂಬುದರ ಬಗ್ಗೆ ಮಾಹಿತಿ ಇಲ್ಲ. ಇದ್ದಕ್ಕಿದಂತೆ ಮದುವೆಯ ಫೋಟೋ ಶೇರ್ ಮಾಡಿರೋದು ಅನೇಕರಿಗೆ ಅಚ್ಚರಿ ಮೂಡಿಸಿದೆ.