ತಮಗೆ ಪಿರಿಯಡ್ಸ್ ಆಗಿಲ್ಲ, ಗರ್ಭಿಣಿಯೇ (Pregnant) ಎಂದು ತಿಳಿದುಕೊಳ್ಳುವುದಕ್ಕಾಗಿ ರಕ್ತ ಪರೀಕ್ಷೆ ಮಾಡಿಸಿದ್ದೇನೆ. ನಾನು ಪ್ರಗ್ನೆಂಟ್ ಆಗಿದ್ದೇನೆ ದಯವಿಟ್ಟು ಮನೆಯಿಂದ ನನ್ನ ಆಚೆ ಕಳುಹಿಸಿ ಎಂದು ಹಿಂದಿ ಬಿಗ್ ಬಾಸ್ (Bigg Boss) ಸ್ಪರ್ಧಿ, ನಟಿ ಅಂಕಿತಾ ಲೋಖಂಡೆ (Ankita Lokhande) ಹೇಳಿಕೊಂಡಿದ್ದರು. ಅಂಕಿತಾ ಹೇಳಿಕೆ ಭಾರೀ ಚರ್ಚೆ ಹುಟ್ಟು ಹಾಕಿತ್ತು.
ಅಂಕಿತಾ ಲೋಖಂಡೆ ಕೋರಿಕೆಯಂತೆ ಬಿಗ್ ಬಾಸ್ ಟೀಮ್ ಪ್ರೆಗ್ನೆಸಿ ಟೆಸ್ಟ್ ಮಾಡಿಸಿತ್ತು. ಇದೀಗ ಟೆಸ್ಟ್ ರಿಸೆಲ್ಟ್ ಬಂದಿದ್ದು, ನೆಗೆಟಿವ್ ರಿಸೆಲ್ಟ್ ಬಂದಿದೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಅಂಕಿತಾ ಇನ್ನಷ್ಟು ದಿನ ಅದೇ ಮನೆಯಲ್ಲಿ ಉಳಿದುಕೊಳ್ಳಲಿದ್ದಾರೆ.
![Demo](https://ainlivenews.com/wp-content/uploads/2023/12/spoorthi-1.jpg)
ಸದ್ಯ ಪ್ರಸಾರವಾಗುತ್ತಿರುವ ಸೀಸನ್ ನಲ್ಲಿ ನಟಿ ಅಂಕಿತಾ ಲೋಖಂಡೆ ಮತ್ತು ಪತಿ ವಿಕ್ಕಿ ಜೈನ್ (Vicky Jain)ಇಬ್ಬರೂ ಬಿಗ್ ಬಾಸ್ ಮನೆಯೊಳಗೆ ಇದ್ದಾರೆ. ಮನೆಗೆ ಹೋಗುವ ಮುನ್ನವೇ ಅಂಕಿತಾ ಗರ್ಭಿಣಿಯಾಗಿದ್ದು, ಆ ಕುರಿತು ಅವರಿಗೆ ಮಾಹಿತಿ ಇರಲಿಲ್ಲ ಎಂದು ಹೇಳಲಾಗಿತ್ತು. ಮತ್ತು ತಮ್ಮನ್ನು ಹೊರಗೆ ಕಳುಹಿಸುವಂತೆ ಅವರು ಕೇಳಿಕೊಂಡಿದ್ದರು.
![](https://ainlivenews.com/wp-content/uploads/2024/01/Ad-Banner-copy-scaled.jpg)