ಬಿಗ್ ಬಾಸ್ ಸೀಸನ್ 11ರ ವಿನ್ನರ್ ಆಗಿ ಹನುಮಂತು ಹೊರ ಹೊಮ್ಮಿದ್ದಾರೆ. ವೈಲ್ಡ್ ಕಾರ್ಡ್ ಮೂಲಕ ಎಂಟ್ರಿಕೊಟ್ಟಿದ್ದ ಹನುಮಂತ ಈಗ ಕಪ್ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.
ಭಾರತದ ಮೊಟ್ಟ ಮೊದಲ ಡಬಲ್ ಡೆಕ್ಕರ್ ಪ್ಲೈ ಓವರ್ ರಸ್ತೆ ಸ್ಥಿತಿ ನೋಡಿದ್ದೀರಾ? ಎಲ್ಲೆಲ್ಲೂ ಗುಂಡಿ!
ಇಲ್ಲಿಯವರೆಗೆ ಶೋ ಆರಂಭಗೊಂಡಾಗ ಮನೆಯನ್ನು ಪ್ರವೇಶ ಮಾಡಿದ ಸ್ಪರ್ಧಿಗಳೇ ಬಿಗ್ ಬಾಸ್ ಟ್ರೋಫಿ ಗೆಲ್ಲುತ್ತಿದ್ದರು. ಆದರೆ ಬಿಗ್ ಬಾಸ್ ಇತಿಹಾಸದಲ್ಲಿ ವೈಲ್ಡ್ ಕಾರ್ಡ್ ಸ್ಪರ್ಧಿ ಗೆದ್ದಿದ್ದು ಇದೇ ಮೊದಲು.
ಟ್ರೋಫಿ ಜಯಿಸಿದ ಬಳಿಕ ವೇದಿಕೆಯಲ್ಲಿ ಮಾತನಾಡಿದ ಹನುಮಂತ, ದೇವರಾಣೆ ನಾನು ಗೆಲ್ಲುತ್ತೇನೆ ಅಂತ ಬಿಗ್ ಬಾಸ್ ಮನೆಗೆ ಬಂದಿರಲಿಲ್ಲ. ಹೋಗಿ ಮಜಾ ಮಾಡಿ ಬರೋಣ ಅಂತ ಬಂದಿದ್ದೆ ಎಂದು ತಿಳಿಸಿದರು.
ನಾನು ಗೆಲ್ತೀನಿ ಅಂತ ಗೊತ್ತಿದ್ದರೆ ಬಾಯಿ ಪಾಠ ಮಾಡಿಕೊಂಡು ಬರುತ್ತಿದ್ದೆ. ಆದರೆ ಈಗ ಏನು ಮಾತನಾಡಬೇಕು ಅಂತ ಗೊತ್ತಾಗುತ್ತಿಲ್ಲ. ದೇವರು, ಸುದೀಪ್ ಸರ್, ಕನ್ನಡ ನಾಡಿನ ಜನರ ಆಶೀರ್ವಾದದಿಂದ ನಾನು ಗೆದ್ದಿದ್ದಿದ್ದೇನೆ ಎಂದರು.