ವಿಜಯಪುರ:- ಜಿಲ್ಲೆಯ ಸಿಂದಗಿ ತಾಲೂಕಿನ ಗಬಸಾವಳಗಿ ಗ್ರಾಮದ ಬಳಿ NH-52 ರಲ್ಲಿ ಬೈಕ್ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರನು ಸ್ಥಳದಲ್ಲಿಯೆ ಸಾವಿಗೀಡಾಗಿದ್ದು ಬಸ್ ಬೆಂಕಿ ಹೊತ್ತಿ ಸುಟ್ಟು ಕರಕಲಾದ ಘಟನೆ ನಡೆದಿದೆ.
ಅಪಘಾತಕ್ಕಿಡಾದ KA-28 F-2469 ನಂಬರಿನ ಈ ಬಸ್ಸಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು ಸುದ್ದಿ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂಧಿಗಳು ದೌಡಾಯಿಸಿ ಬಸ್ಸಿಗೆ ಹೊತ್ತಿದ ಬೆಂಕಿಯನ್ನು ನಂದಿಸಿದ್ದಾರೆ.
ಘಟನೆಯ ಸ್ಥಳಕ್ಕೆ ಸಿಂದಗಿ ಪೋಲಿಸರು ಬೇಟಿ ನೀಡುವ ಮೂಲಕ ಸ್ಥಳ ಪರಿಶೀಲನೆಯನ್ನು ನಡೆಸಿ ದೂರು ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.