ತುಮಕೂರು:– ಬೈಕ್ ಹಾಗೂ ಓಮಿನಿ ಕಾರು ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಘಟನೆ ತುಮಕೂರು ತಾಲೂಕಿನ ಓಬಳಾಪುರ ಬಳಿ ಜರುಗಿದೆ.
ಬೈಕ್ ನಲ್ಲಿದ್ದ ಸವಾರರಿಗೆ ಗಂಭೀರ ಗಾಯವಾಗಿದ್ದು, ಓಮಿನಿಯಲ್ಲಿದ್ದ ಮಹಿಳೆಗೂ ಗಾಯವಾಗಿದೆ. ಮುಖಾಮುಖಿ ಡಿಕ್ಕಿಯಾಗಿ ಈ ದುರಂತ ನಡೆದಿದೆ. ತುಮಕೂರು ಕಡೆಯಿಂದ ಹೋಗ್ತಿದ್ದ ಬೈಕ್, ಕೊರಟಗೆರೆ ಕಡೆಯಿಂದ ಬರ್ತಿದ್ದ ಓಮಿನಿ ಕಾರು ನಡುವೆ ಡಿಕ್ಕಿ ಸಂಭವಿಸಿದೆ.
ಬೈಕ್ ನವರು ಕುಡಚಿ ಮೂಲದವರು ಎನ್ನಲಾಗಿದೆ..ಎತ್ತಿನಹೊಳೆ ಕಾಮಗಾರಿ ಕೆಲಸಕ್ಕೆ ಬಂದಿದ್ದರು. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.