ದೊಡ್ಡಬಳ್ಳಾಪುರ: ಬೈಕ್ ಮತ್ತು ಪೆಟ್ರೋಲ್ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿರುವ ಘಟನೆ ನಗರದ ಟಿಬಿ ವೃತ್ತದಲ್ಲಿ ನಡೆದಿದೆ. ತಾಲೂಕಿನ ಕೆಳಗಿನ ಜೂಗನಹಳ್ಳಿ ನಿವಾಸಿ ಹನುಮಂತರಾಯಪ್ಪ (60) ಗಾಯಗೊಂಡಿರುವ ವ್ಯಕ್ತಿ.
ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಪೆಟ್ರೋಲ್ ಟ್ಯಾಂಕರ್ ಚಕ್ರದ ಕೆಳಗೆ ಬೈಕ್ ಸಿಲುಕಿ ನುಜ್ಜುಗುಜ್ಜಾಗಿದೆ, ಸ್ಥಳಕ್ಕೆ ನಗರ ಠಾಣಾ ಪೊಲೀಸರು ಧಾವಿಸಿ ಸಂಚಾರ ದಟ್ಟಣೆ ನಿಯಂತ್ರಿಸಿ, ಪರಿಶೀಲನೆ ನಡೆಸಿದರು.