ಬೆಂಗಳೂರು: ಬೆಂಗಳೂರು ಹೊರವಲಯದ ಆನೇಕಲ್-ಅತ್ತಿಬೆಲೆ ಮುಖ್ಯರಸ್ತೆಯ ಮಾಯಸಂದ್ರ ಬಳಿ ಹಿಟ್ ಆ್ಯಂಡ್ ರನ್ಗೆ ಬೈಕ್ ಸವಾರ ಬಲಿಯಾಗಿದ್ದಾರೆ. ಮಧುಸೂಧನ್ ಮೃತ ದುರ್ದೈವಿ. ಬುಧವಾರ ರಾತ್ರಿ ಎಂಟು ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಮಧುಸೂಧನ್ ಕೆಲಸ ಮುಗಿಸಿಕೊಂಡು ಅತ್ತಿಬೆಲೆಯಿಂದ ಆನೇಕಲ್ ಕಡೆಗೆ ಬರುವಾಗ ಬೈಕ್ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ.
ನಿಮಗೆ ಈರುಳ್ಳಿ ಕತ್ತರಿಸಿ ಫ್ರಿಡ್ಜ್ʼನಲ್ಲಿ ಇಡೋ ಅಭ್ಯಾಸವಿದೆಯಾ?! ಇದೆಷ್ಟು ಡೇಂಜರ್ ಗೊತ್ತಾ ?
ಈ ವೇಳೆ ತಲೆಯ ಭಾಗಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಮಧುಸೂದನ್ರನ್ನು ಕೂಡಲೇ ಸ್ಥಳೀಯರು ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತ ಮಾಡಿ ಪರಾರಿ ಆಗಿರುವ ವಾಹನಕ್ಕೆ ಹುಡುಕಾಟ ನಡೆಸಿದ್ದಾರೆ.