ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನೋಡ ನೋಡುತ್ತಿದಂತೆ ಮತ್ತೊಂದು ಐಷಾರಾಮಿ ಬೈಕ್ ಶೋರೂಂಗೆ ಬೆಂಕಿಗಾಹುತಿಯಾಗಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ಬೈಕ್ ಗಳು ಸುಟ್ಟು ಕರಕಲಾಗಿವೆ, ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮಹದೇವ ಪುರದ ಬಿ ನಾರಾಯಣ ಪುರದಲ್ಲಿ ನಿನ್ನೆ ಸಂಜೆ 7:30ರ ಸುಮಾರಿಗೆ ಯಮಹಾ ಬೈಕ್ ಶೋರೂಂನಲ್ಲಿ ಬೆಂಕಿ ಹೊತ್ತಿಕೊಂಡಿದೆ.
ಬೆಂಕಿ ಇಡೀ ಶೋರೂಂಗೆ ಹೊತ್ತಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಬೈಕ್ ಗಳು ಸುಟ್ಟು ಕರಕಲಾಗಿವೆ. ಶೋರೂಂನಲ್ಲಿದ್ದ ಸುಮಾರು 30 ಬೈಕ್, ಹಿಂಭಾಗ ಸರ್ವೀಸ್ ಸೆಂಟರ್ ನಲ್ಲಿದ್ದ ಹತ್ತಕ್ಕೂ ಹೆಚ್ಚು ಬೈಕ್ ಸುಟ್ಟು ಭಸ್ಮವಾಗಿವೆ.
ಹಲಸು ಕೃಷಿ ಮಾಡಿ ಎಕರೆಗೆ 2.5 ಲಕ್ಷ ಆದಾಯ ಪಡೆಯಿರಿ! ವಿಧಾನಗಳೇನು.? ಇಲ್ಲಿದೆ ಮಾಹಿತಿ
ನೋಡ ನೋಡುತ್ತಿದ್ದಂತೆ ಪಕ್ಕದಲ್ಲೇ ಇದ್ದ ಟ್ರಂಪ್ ಶೋರೂಂ ಕಡೆ ಬೆಂಕಿ ವ್ಯಾಪಿಸಿದೆ. ಕೂಡಲೇ ಎಚ್ಚೇತ್ತ ಸಿಬ್ಬಂದಿ ಬೈಕ್ ಗಳನ್ನು ಶಿಫ್ಟ್ ಮಾಡಿದ್ದಾರೆ. ಯಮಹಾ ಶೋರೂಂನಲ್ಲಿದ್ದ ಲಕ್ಷಾಂತರ ಮೌಲ್ಯದ ಬೈಕ್ ಗಳು ಮಾತ್ರ ಬೆಂಕಿಗಾಹುತಿಯಾಗಿವೆ.
ಇನ್ನೂ ವಿಷಯ ತಿಳಿಯುತ್ತಿದಂತೆ ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದ್ರು, ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಮೆಲ್ಮೋಟಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ತನಿಖೆ ಕೈ ಗೊಂಡಿದ್ದಾರೆ.