ಮಾಲ್ಡೀವ್ಸ್ ಮತ್ತು ಭಾರತದ ನಡುವೆ ಏನೆಲ್ಲ ಸಂಗತಿಗಳು ನಡೆಯುತ್ತಿವೆ. ಅದರಲ್ಲೂ ಬಾಲಿವುಡ್ ಸೆಲೆಬ್ರಿಟಿಗಳು ಬೈಕಾಟ್ ಮಾಲ್ಡೀವ್ಸ್ ಅಭಿಯಾನಕ್ಕೆ ಸಖತ್ ಬೆಂಬಲ ನೀಡುತ್ತಿದ್ದಾರೆ. ಈ ಹೊತ್ತಿನಲ್ಲಿ ಬಾಲಿವುಡ್ ನಟಿ ಬಿಪಾಶಾ ಬಸು ಮಾಲ್ಡೀವ್ಸ್ ನಲ್ಲಿ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಸುಂದರ ತಾಣದಲ್ಲಿ ಹುಟ್ಟು ಹಬ್ಬ ಎಂದು ಫೋಟೋ ಹಂಚಿಕೊಂಡಿದ್ದಾರೆ.
ಜನವರಿ 7 ರಂದು ಬಿಪಾಶಾ ಮಾಲ್ಡೀವ್ಸ್ ನಲ್ಲಿ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದು, ಆ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಆ ಫೋಟೋಗಳು ಸಾಕಷ್ಟು ನೆಗೆಟಿವ್ ಕಾಮೆಂಟ್ ಬಂದಿದೆ. ನಿಮಗೆ ಮಾಲ್ಡೀವ್ಸ್ ಮತ್ತು ಭಾರತದ ನಡುವಿನ ಕಿತ್ತಾಟ ಗೊತ್ತಿಲ್ಲವಾ ಎಂದು ಹಲವರು ಕಾಮೆಂಟ್ ಮಾಡಿದ್ದಾರೆ.
ನರೇಂದ್ರ ಮೋದಿಯನ್ನು (Narendra Modi) ಟೀಕಿಸಿ ಪೇಚೆಗೆ ಸಿಲುಕಿದ ಮಾಲ್ಡೀವ್ಸ್ (Maldives) ಸರ್ಕಾರ ಡ್ಯಾಮೇಜ್ ಕಂಟ್ರೋಲ್ಗೆ ಮುಂದಾಗಿದ್ದು, ಅಧ್ಯಕ್ಷ ಮೊಹಮ್ಮದ್ ಮಿಜು (Mohamed Muizzu) ಭಾರತಕ್ಕೆ ಬರಲು ಮುಂದಾಗಿದ್ದಾರೆ.
ಸ್ವತ: ಮಾಲ್ಡೀವ್ಸ್ ಜನರೇ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಅಧ್ಯಕ್ಷ ಮೊಹಮ್ಮದ್ ಮಿಜು ನೇತೃತ್ವದ ಸರ್ಕಾರ ಮೂವರು ಸಚಿವರನ್ನು ಅಮಾನತು ಮಾಡುವ ಮೂಲಕ ಶಿಸ್ತು ಕ್ರಮ ಜರುಗಿಸಿತ್ತು. ಈಗ ಮೊಹಮ್ಮದ್ ಮಿಜು ವಿರುದ್ಧ ಈಗ ವಿಪಕ್ಷ ಅವಿಶ್ವಾಸ ನಿರ್ಣಯವನ್ನು ಮಂಡಿಸಲು ಮುಂದಾಗಿವೆ ಎಂದು ವರದಿಯಾಗಿದೆ. ಈ ಬೆನ್ನಲ್ಲೇ ಮೊಹಮ್ಮದ್ ಮಿಜು ಭಾರತ (India) ಪ್ರವಾಸ ಕೈಗೊಳ್ಳಲು ಮುಂದಾಗಿದ್ದಾರೆ.
ಮಾಲ್ಡೀವ್ಸ್ ಸರ್ಕಾರ ಈ ಪ್ರಸ್ತಾಪವನ್ನು ಭಾರತದ ಮುಂದಿಟ್ಟರೂ ಮೋದಿ ಸರ್ಕಾರ ಇಲ್ಲಿಯವರೆಗೆ ಯಾವುದೇ ಪ್ರತಿಕ್ರಿಯೆ ನೀಡಲ್ಲ. ಮೊದಲು ಮಾಲ್ಡೀವ್ಸ್ನಲ್ಲಿದ್ದ ಸರ್ಕಾರ ಭಾರತದ ಪರವಾಗಿತ್ತು.
ಕೋವಿಡ್ ಸಮಯಲ್ಲಿ ಭಾರತ ಲಸಿಕೆಯನ್ನು ರಫ್ತು ಮಾಡಿತ್ತು. ಹೀಗಿದ್ದರೂ ಭಾರತದ ವಿರುದ್ಧವೇ ಹೇಳಿಕೆ ನೀಡಿಯೇ ಮೊಹಮ್ಮದ್ ಮಿಜು ಅಧ್ಯಕ್ಷ ಚುನಾವಣೆಯಲ್ಲಿ ಜಯಗಳಿಸಿದ್ದರು. ಸದ್ಯ ಮೊಹಮ್ಮದ್ ಮಿಜು ಚೀನಾ ಪ್ರವಾಸದಲ್ಲಿದ್ದಾರೆ.