ಸ್ಯಾಂಡಲ್ ವುಡ್ ನ ಸ್ಟಾರ್ ನಟ, ರಾಕಿಂಗ್ ಸ್ಟಾರ್ ಯಶ್ ಅವರು ಇಂದು ಅವರ ಹುಟ್ಟುಹಬ್ಬದ ಸಂಭ್ರಮದಲ್ಲಿ ಇದ್ದಾರೆ. ಹೀಗಾಗಿ ಎಲ್ಲಾ ಕಡೆಯಿಂದಲೂ ಶುಭಾಶಯಗಳ ಮಹಾಪೂರವೇ ಹರಿದು ಬರ್ತಿದೆ.
ಯಶ್ ಗೆ ಕರ್ನಾಟಕ ಮಾತ್ರವಲ್ಲ ವಿಶ್ವಾದ್ಯಂತ ಅಭಿಮಾನಿಗಳಿದ್ದಾರೆ. ಎಲ್ಲರೂ ಯಶ್ಗೆ ಬರ್ತ್ಡೇ ಶುಭಾಶಯ ತಿಳಿಸುತ್ತಿದ್ದಾರೆ. ಅವರಿಗೆ ಮತ್ತಷ್ಟು ಗೆಲುವು ಸಿಗಲಿ ಎಂದು ಫ್ಯಾನ್ಸ್ ಹಾರೈಸುತ್ತಿದ್ದಾರೆ.
ಯಶ್ ಅವರು ಏಕಾಏಕಿ ದೊಡ್ಡ ಸ್ಟಾರ್ ಆದವರಲ್ಲ. ಬಣ್ಣದ ಲೋಕಕ್ಕೆ ಕಾಲಿಡುವಾಗ ಅವರಿಗೆ ಯಾವುದೇ ಹಿನ್ನೆಲೆ ಇರಲಿಲ್ಲ. ಧಾರಾವಾಹಿ ಮೂಲಕ ವೃತ್ತಿಜೀವನ ಆರಂಭಿಸಿದ ಯಶ್ ನಂತರ ಚಿತ್ರರಂಗಕ್ಕೆ ಕಾಲಿಟ್ಟರು. ಈಗ ತಮ್ಮ ಸಾಮ್ರಾಜ್ಯವನ್ನು ಪ್ಯಾನ್ ಇಂಡಿಯಾ ಮಟ್ಟಕ್ಕೆ ವಿಸ್ತರಿಸಿಕೊಂಡಿದ್ದಾರೆ.
ಇನ್ನೂ ಯಶ್ ಅವರು ಟ್ಯಾಕ್ಸಿಕ್ಸ್ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿ ಇರುವ ಕಾರಣ ಅಭಿಮಾನಿಗಳ ಜೊತೆ ಬರ್ತ್ಡೇ ಆಚರಣೆ ಸಾಧ್ಯವಿಲ್ಲ ಎಂದು ಯಶ್ ಈಗಾಗಲೇ ತಿಳಿಸಿದ್ದಾರೆ. ಇದು ಅಭಿಮಾನಿಗಳಿಗೆ ಕೊಂಚ ಬೇಸರ ಮೂಡಿಸಿದೆ.