ಹುಬ್ಬಳ್ಳಿ : ಬಿಸಿಯೂಟ ನೌಕರರ ಬೇಡಿಕೆಗಳನ್ನು ಈಡೇರಿಸಿ ಸಮಸ್ಯೆ ಪರಿಹರಿಸಲು ಆಗ್ರಹಿಸಿ ಮಂಗಳವಾರ ಕರ್ನಾಟಕ ರಾಜ್ಯ ಅಕ್ಷೃರ ದಾಸೋಹ ನೌಕರರ ಸಂಘದ ಜಿಲ್ಲಾ ಸಮಿತಿಯಿಂದ ನಗರದ ಕೇಂದ್ರ ಗಣಿ ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
Sleeping Tip: 6 ಗಂಟೆಗಿಂತ ಕಡಿಮೆ ನಿದ್ದೆ ಮಾಡ್ತೀರಾ..?! ವಕ್ಕರಿಸಿಬಿಟ್ಟೀತು ಈ ಮಾರಣಾಂತಿಕ ಖಾಯಿಲೆ ಹುಷಾರ್!
ಬಿಸಿಯೂಟ ನೌಕರರು ಸೇರಿದಂತೆ ಹೊರಗುತ್ತಿಗೆಯಲ್ಲಿ ಕಾರ್ಯನಿರ್ವಹಿಸುವ ನೌಕರರಿಗೆ ಕನಿಷ್ಠ ವೇತನ ನೀಡಲಾಗುತ್ತಿದೆ. ಸರ್ಕಾರ ಮತ್ತು ಏಜೆಂಟರ ನಡುವೆ ಹೊರಗುತ್ತಿಗೆ ನೌಕರರು ಸಂಕಷ್ಟದಲ್ಲಿ ಜೀವನ ನಡೆಸುತ್ತಿದ್ದಾರೆ. ಆಹಾರ, ಆರೋಗ್ಯ ಮತ್ತು ಶಿಕ್ಷಣ, ಪ್ರಜಾಪ್ರಭುತ್ವದ ಬೆಳವಣಿಗೆಗೆ ಬೇಕಾಗಿರುವ ಮೂಲಭೂತ ಹಕ್ಕುಗಳಾಗಿದ್ದು, ಇವುಗಳನ್ನು ಪ್ರತಿಯೊಬ್ಬರಿಗೂ ಸಮಾನವಾಗಿ ಹಂಚಿಕೆ ಮಾಡಬೇಕು’ ಎಂದು ಒತ್ತಾಯಿಸಿದರು.
ಸಿಐಟಿಯುನ ಮುಖಂಡ ಮಹೇಶ ಪತ್ತಾರ ಮಾತನಾಡಿ,
೨೦೨೩ರ ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಎಐಟಿಯುಸಿ ನಾಯಕರೊಂದಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ರವರು ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ಚರ್ಚಿಸಿ ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನ ಬೆಂಬಲಿಸಿ ಅಧಿಕಾರಕ್ಕೆ ಬಂದರೆ ನಮ್ಮ ಸರ್ಕಾರ ಆರನೇ ಗ್ಯಾರಂಟಿ ಯಾಗಿ ಬಿಸಿಯೂಟ ತಯಾರಕರಿಗೆ ಈಗಿರುವ ವೇತನಕ್ಕೆ ಬದಲಾಗಿ ೬ ಸಾವಿರ ರೂ.ಗಳನ್ನು ಹೆಚ್ಚಿಸಲಾಗು ವುದೆಂದು ಬೆಳಗಾವಿಯ ಚುನಾವಣಾ ಪ್ರಚಾರದ ವೇದಿಕೆಯಲ್ಲಿ ಘೋಷಿಸಿದ್ದರು.
ಅದರಂತೆ ಈ ಬಾರಿ ಕಾಂಗ್ರೆಸ್ ಸರ್ಕಾರ ತಮ್ಮ ಪ್ರಣಾಳಿಕೆಯಲ್ಲಿ ೬ನೇ ಗ್ಯಾರಂಟಿಯಾಗಿ ಘೋಷಿಸಿ ೨೦೨೩ರ ಜುಲೈ ತಿಂಗಳಿನಲ್ಲಿ ಕರ್ನಾಟಕ ಸರ್ಕಾರ ಮಂಡಿಸುವ ನೂತನ ಬಜೆಟ್ನಲ್ಲಿ ಬಿಸಿಯೂಟ ತಯಾರಕರಿಗೆ ೬ ಸಾವಿರ ರೂ. ವೇತನವನ್ನು ಹೆಚ್ಚಿಸಬೇಕೆಂದು ವಿವಿಧ ಸಂಘಟನೆಗಳ ಮುಖಂಡರು ರಾಜ್ಯ ಸರ್ಕಾರವನ್ನು ಸಹ ಒತ್ತಾಯಿಸಿದ್ದಾರೆ. ಬಿಸಿಯೂಟ ನೌಕರರ ಸಂಘದ ಅಧ್ಯಕ್ಷೆ ಚೆನ್ನಮ್ಮ, ಅನೇಕ ಬಿಸಿಯೂಟ ತಯಾರಿಕರ ಸಂಘದ ಕಾರ್ಯಕರ್ತರು, ಮುಖಂಡರು ಮುಂತಾದ ವರು ಭಾಗವಹಿಸಿದ್ದರು