ಬೆಂಗಳೂರು:- ಕರ್ನಾಟಕ ರಾಜ್ಯ ಬಿಸಿಯೂಟ ಸ್ವಯಂಸೇವಾ ಸಂಸ್ಥೆಗಳ ಒಕ್ಕೂಟವು ಇಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿ ಮಾಡಿದರು.
ಭೇಟಿ ವೇಳೆ ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಫ್ರೌಡಶಾಲೆಗಳಲ್ಲಿ ಬಿಸಿಯೂಟ ವಿತರಣೆ ಮಾಡುತ್ತಿರುವ ಸಂಸ್ಥೆಗಳಿಗೆ ಸರ್ಕಾರವು ಸಹಕಾರ ನೀಡಬೇಕೆಂದು ಒಕ್ಕೂಟವು ಮನವಿ ಮಾಡಿದೆ.
ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಒಕ್ಕೂಟದ ಅಧ್ಯಕ್ಷರ ಮಾರ್ಗದರ್ಶನದಲ್ಲಿ ಶಿಕ್ಷಣ ಸಚಿವರ ಕಚೇರಿಗೆ ಭೇಟಿ ಮಾಡಿ ಮನವಿ ಸಲ್ಲಿಸಿದರು.
ಅಷ್ಟೇ ಅಲ್ಲದೇ ಒಕ್ಕೂಟದ ಅಧ್ಯಕ್ಷರಾದ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು, ಕಾರ್ಯದರ್ಶಿಗಳಾದ ಕೆ ಭೀಮರವರು ಖಜಾಂಚಿಗಳಾದ ಕಲ್ಲಪ್ಪ ಬೋರಣ್ಣನವರು ತಮ್ಮ ಸ್ವಯಂಸೇವಾ ಸಂಸ್ಥೆಗಳ ಒಕ್ಕೂಟಕ್ಕೆ ಸರ್ಕಾರದ ಸಹಕಾರ ಹಾಗೂ ಸ್ಪಂದನೆಯನ್ನು ನೀಡಲು ಈ ವೇಳೆ ಮನವಿ ಮಾಡಿಕೊಂಡರು.
ಮನವಿಗೆ ಸ್ಪಂದಿಸಿದ ಸಚಿವರು, ಕೂಡಲೇ ಒಕ್ಕೂಟದ ಒಂದು ಸಭೆ ಮಾಡಿ ಕುಂದುಕೊರತೆಗಳನ್ನು ಬಗೆಹರಿಸಲಾಗುತ್ತದೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಒಕ್ಕೂಟದ ಸದಸ್ಯರುಗಳಾದ ರವೀಂದ್ರ ಕುಮಾರ್, ಮಂಜುನಾಥ್ ಅಳವಣಿ, ನಾಗೇಂದ್ರ ಸುಬ್ಬರಾಜು , ಸಲ್ಮಾನ್ ಹಾಗೂ ಪ್ರವೀಣ್ ಉಪಸ್ಥಿತರಿದ್ದರು