ಬೆಂಗಳೂರು:- ಹಿರಿಯ ಐಪಿಎಸ್ ಅಧಿಕಾರಿ ಸಂದೀಪ್ ಪಾಟೀಲ್ ರನ್ನು ಬಿಟ್ ಕಾಯಿನ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ವಿಚಾರಣೆ ಮಾಡಿದ್ದಾರೆ.
ಪ್ರಕರಣ ಸಂಬಂಧ ಅಧಿಕಾರಿಗೆ ಬುಲಾವ್ ಹಿನ್ನೆಲೆ ಇಂದು ಮಧ್ಯಾಹ್ನ 3.30ರ ಸುಮಾರಿಗೆ ವಿಚಾರಣೆಗಾಗಿ ಸಿಐಡಿ ಕಚೇರಿಗೆ ಹಾಜರಾಗಿದ್ದ ಸಂದೀಪ್ ಪಾಟೀಲ್, ಬಿಟ್ ಕಾಯಿನ್ ಹಗರಣ ಕೇಸ್ ಸಂಬಂಧ ಮಾಹಿತಿ ನೀಡಿ ವಾಪಸ್ ತೆರಳಿದ್ದಾರೆ. ಸಂದೀಪ್ ಪಾಟೀಲ್ ಸಿಸಿಬಿ ಜಂಟಿ ಆಯುಕ್ತರಾಗಿದ್ದಾಗ ಕೇಸ್ ದಾಖಲಾಗಿತ್ತು. ಬಿಟ್ ಕಾಯಿನ್ ಪ್ರಕರಣದ ಹೆಚ್ಚಿನ ತನಿಖೆಯನ್ನು ಸಿಐಡಿ ಎಸ್ಐಟಿ ನಡೆಸುತ್ತಿದ್ದು, ತನಿಖೆಯ ಭಾಗವಾಗಿ ಸಂದೀಪ್ ಪಾಟೀಲ್ ವಿಚಾರಣೆಯನ್ನು ಇಂದು ಮಾಡಲಾಗಿದೆ.
ಬಿಟ್ ಕಾಯಿನ್ ಹಗರಣದ ಸಮಯದಲ್ಲಿ ಸಿಸಿಬಿ ಜಂಟಿ ಪೊಲೀಸ್ ಆಯುಕ್ತರಾಗಿದ್ದ ಸಂದೀಪ್ ಪಾಟೀಲ್
ಪ್ರಕರಣದ ತನಿಖಾಧಿಕಾರಿಯಾಗಿದ್ದರು. ಕೆಲ ಮಾಹಿತಿ ವಿನಿಮಯಕ್ಕೆ SIT ಅಧಿಕಾರಿಗಳು ಕರೆದಿದ್ದರು. ಸದ್ಯ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ.
2023ರ ಜುಲೈನಲ್ಲಿ ಕಾಂಗ್ರೆಸ್ ಸರ್ಕಾರ, SIT ರಚನೆ ಮಾಡಿತ್ತು. ಆಗ ಕಾಟನ್ ಪೇಟೆ ಠಾಣೆಯಲ್ಲಿ ಒಂದು ಕೇಸ್ ದಾಖಲು ಮಾಡಿದ್ದರು.