ಹುಬ್ಬಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸಿ ಹುಬ್ಬಳ್ಳಿ ಧಾರವಾಡ ಕೇಂದ್ರ ಮಹಿಳಾ ಮೋರ್ಚಾ ವತಿಯಿಂದ ಇಂದು ಹುಬ್ಬಳ್ಳಿಯಲ್ಲಿ ಹೋಮ – ಹವನ ಮಾಡಿದರು.
. ಮೋದಿಯವರು ಪಂಜಾಬ್ ಪ್ರವಾಸದ ವೇಳೆ ರೈತರ ಪ್ರತಿಭಟನೆ ನಡೆಸಿದ್ದಕ್ಕಾಗಿ ಪ್ರಧಾನಿಯವರಿಗೆ ಭದ್ರತಾ ಲೋಪ ಉಂಟಾಗಿ, ಕೆಲ ಗಂಟೆಗಳ ಕಾಲ ಟ್ರಾಫಿಕ್ ನಲ್ಲಿ ಸಿಲುಕಿ ಪ್ರವಾಸವನ್ನು ಮೊಟಕುಗೊಳಿಸಿ ಅರ್ಧಕ್ಕೆ ವಾಪಾಸ್ಸಾಗಿದ್ದರು. ಹುಬ್ಬಳ್ಳಿ ಧಾರವಾಡ ಕೇಂದ್ರ ಮಹಿಳಾ ಮೋರ್ಚಾ ವತಿಯಿಂದ ಬಿಜೆಪಿ ಹುಬ್ಬಳ್ಳಿಯ ಜಯನಗರದ ಈಶ್ವರ ದೇವಸ್ಥಾನದಲ್ಲಿ ಮಹಾ ಮೃತ್ಯುಂಜಯ ಹೋಮ ಹಾಗೂ ಜಪ ಕಾರ್ಯಕ್ರಮ ಆಯೋಜನೆ ಮಾಡುವ ಮೂಲಕ ಪ್ರಧಾನಿ ಮೋದಿಯವರಿಗೆ ಯಾವುದೇ ವಿಘ್ನಗಳು ಬಾರದಿರಲಿ ಎಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು.
