ನವದೆಹಲಿ: ರಾಜ್ಯಸಭೆ ಚುನಾವಣೆಗೆ ಇದೀಗ BJP ಅಭ್ಯರ್ಥಿಗಳ ಪಟ್ಟಿ ಪ್ರಕಟ ಮಾಡಿದ್ದು, ಮಾಜಿ ಸಚಿವ ಸೋಮಣ್ಣಗೆ ರಾಜ್ಯಸಭೆ ಟಿಕೆಟ್ ಕೈತಪ್ಪಿದೆ. ವಿ.ಸೋಮಣ್ಣ ಅವರು ಟಿಕೆಟ್ ಆಕಾಂಕ್ಷಿಯಾಗಿದ್ದರು. ಅವರ ಬದಲು ನಾರಾಯಣ ಭಾಂಡಗೆಗೆ ಟಿಕೆಟ್ ನೀಡಲಾಗಿದೆ.
ಜೊತೆಗೆ ಬಿಹಾರದಲ್ಲಿ ಡಾ.ಧರ್ಮಶೀಲಾ ಗುಪ್ತಾ ಹಾಗೂ ಡಾ.ಭೀಮಸಿಂಗ್ ಸೇರಿ ಇಬ್ಬರಿಗೆ ರಾಜ್ಯಸಭೆ ಟಿಕೆಟ್ ನೀಡಲಾಗಿದೆ. ಇನ್ನುಳಿದಂತೆ ಛತ್ತೀಸ್ಗಢದಲ್ಲಿ ರಾಜಾ ದೇವೇಂದ್ರಪ್ರತಾಪ್ ಸಿಂಗ್, ಹರಿಯಾಣದಲ್ಲಿ ಸುಭಾಷ್ ಬಾರ್ಲಾಗೆ ಹಾಗೂ ಉತ್ತರ ಪ್ರದೇಶದಲ್ಲಿ ಆರ್.ಪಿ.ಎನ್ ಸಿಂಗ್ಗೆ ಟಿಕೆಟ್ ನೀಡಲಾಗಿದೆ.
![Demo](https://ainlivenews.com/wp-content/uploads/2023/12/spoorthi-1.jpg)
ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ
1.ಧರ್ಮಶೀಲಾ ಗುಪ್ತಾ: ಬಿಹಾರ 2.ಡಾ.ಭೀಮ್ ಸಿಂಗ್: ಬಿಹಾರ 3.ರಾಜಾ ದೇವೇಂದ್ರ ಪ್ರತಾಪ್ ಸಿಂಗ್: ಛತ್ತೀಸಗಢ್ 4.ಸುಭಾಷ್ ಬರಲಾ: ಹರಿಯಾಣ 5.ನಾರಾಯಾಣ ಭಾಂಡಗೆ: ಕರ್ನಾಟಕ 6.ಆರ್ಪಿಎನ್ ಸಿಂಗ್: ಉತ್ತರ ಪ್ರದೇಶ 7.ಸುಭಾಂಶು ತ್ರಿವೇದಿ: ಉತ್ತರ ಪ್ರದೇಶ 8.ಚೌಧರಿ ತೇಜ್ವೀರ್ ಸಿಂಗ್: ಉತ್ತರ ಪ್ರದೇಶ 9.ಸಾಧನಾ ಸಿಂಗ್: ಉತ್ತರ ಪ್ರದೇಶ 10.ಅಮರಪಾಲ್ ಮೌರ್ಯ: ಉತ್ತರ ಪ್ರದೇಶ 11.ಸಂಗೀತಾ ಬಲ್ವಂತ್: ಉತ್ತರ ಪ್ರದೇಶ 12.ನವೀನ್ ಜೈನ್: ಉತ್ತರ ಪ್ರದೇಶ 13.ಮಹೇಂದ್ರ ಭಟ್: ಉತ್ತರಾಖಂಡ್ 14.ಸಮಿಕಾ ಭಟ್ಟಾಚಾರ್ಯ: ಪಶ್ಚಿಮ ಬಂಗಾಳ
![](https://ainlivenews.com/wp-content/uploads/2024/01/Ad-Banner-copy-scaled.jpg)