ಬೆಂಗಳೂರು: ಹೊಸಕೇಟೆ ಬಳಿಯ ದೇವಸ್ಥಾನಕ್ಕೆ ಮುಸ್ಲಿ ಸಮುದಾಯದ ವ್ಯಕ್ತಿಗೆ ದೇವಸ್ಥಾನ ಸಮಿತಿ ಸದಸ್ಯತ್ವವನ್ನು ನೀಡಿದ್ದನ್ನು ವಿರೋಧಿಸಿ ಕರ್ನಾಟಕ ಬಿಜೆಪಿ ಮಾಡಿದ್ದ ಟ್ವೀಟ್ ಡಿಲೀಟ್ ಮಾಡಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಸುಳ್ಳು ಆರೋಪ ಅಳಿಸಿ ಹಾಕುವುದು ಎಂದರೆ ತನ್ನ ವಾಂತಿನ ತಾನೇ ತಿಂದಂತೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ” ತಾನು ಹೇಳಿದ ಸುಳ್ಳನ್ನು ಅಳಿಸಿಹಾಕುವುದೆಂದರೆ ವಾಂತಿ ಮಾಡಿ, ಅದನ್ನು ಮಾಡಿದವರೇ ತಿಂದ ಹಾಗೆ. ಸುಳ್ಳು ಹೇಳಿ ಸಿಕ್ಕಿಹಾಕಿಕೊಂಡ ರಾಜ್ಯ ಬಿಜೆಪಿ ನಾವು ಸತ್ಯವನ್ನು ಬಿಚ್ಚಿಟ್ಟ ಕೂಡಲೇ ಸಾಮಾಜಿಕ ಮಾಧ್ಯಮಗಳಲ್ಲಿದ್ದ ತನ್ನ ಸುಳ್ಳು ಆರೋಪದ ಹೇಳಿಕೆಯನ್ನು ಅಳಿಸಿಹಾಕಿದೆ ” ಎಂದಿದ್ದಾರೆ.
Pomegranate Juice: ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ದಾಳಿಂಬೆ ಜ್ಯೂಸ್ ಕುಡಿದರೆ ಈ ರೋಗಗಳು ಓಡಿ ಹೋಗುತ್ತೆ!
” ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮರಥೋತ್ಸವ ಸಮಿತಿಗೆ ಕಾಂಗ್ರೆಸ್ ಸರ್ಕಾರ ಮುಸ್ಲಿಮ್ ಸಮುದಾಯದ ವ್ಯಕ್ತಿಯನ್ನು ಸದಸ್ಯರನ್ನಾಗಿ ಮಾಡಿ ಹಿಂದೂಗಳ ಅಧಿಕಾರವನ್ನು ಕಿತ್ತುಕೊಳ್ಳಲು ಹೊರಟಿದೆ ಎಂಬ ಸುಳ್ಳು ಆರೋಪವನ್ನು ರಾಜ್ಯ ಬಿಜೆಪಿ ಮಾಡಿತ್ತು. ಈ ಬ್ರಹ್ಮರಥೋತ್ಸವ ಸಮಿತಿಗೆ ಬಿಜೆಪಿ ಸರ್ಕಾರದ ಕಾಲದಲ್ಲಿಯೂ ಮುಸ್ಲಿಮ್ ಸಮುದಾಯ ವ್ಯಕ್ತಿಗಳನ್ನು ಸದಸ್ಯರನ್ನಾಗಿ ಮಾಡಲಾಗಿತ್ತು ಎಂಬ ಸತ್ಯ ಸಂಗತಿಯನ್ನು ನಾನು ದಾಖಲೆ ಸಮೇತ ಮುಂದಿಟ್ಟದ್ದು ಮಾತ್ರವಲ್ಲ,
ಸಾಮಾಜಿಕ ಮಾಧ್ಯಮಗಳಲ್ಲಿನ ತನ್ನ ಹೇಳಿಕೆಯನ್ನು ಬಿಜೆಪಿ ಅಳಿಸಿಹಾಕಿ ರಾಜ್ಯದ ಜನತೆಯ ಕ್ಷಮೆ ಕೇಳಬೇಕೆಂದು ಆಗ್ರಹಿಸಿದ್ದೆ ” ಎಂದಿದ್ದಾರೆ. ” ಬಣ್ಣ ಬಯಲಾದ ಕೂಡಲೇ ಎಚ್ಚೆತ್ತುಗೊಂಡ ಲಜ್ಜೆಗೆಟ್ಟ ಬಿಜೆಪಿ ಸಾಮಾಜಿಕ ಮಾಧ್ಯಮಗಳಲ್ಲಿದ್ದ ತನ್ನ ಹೇಳಿಕೆಯನ್ನು ಅಳಿಸಿಹಾಕಿದೆ. ಈ ಬಗ್ಗೆ ಇನ್ನೂ ರಾಜ್ಯದ ಜನರ ಕ್ಷಮೆ ಕೇಳಿಲ್ಲ ” ಎಂದು ವಾಗ್ದಾಳಿ ನಡೆಸಿದ್ದಾರೆ.