ಬೆಳಗಾವಿ:- ಬಿಜೆಪಿಯವರು ಮುಸ್ಲಿಂರಿಗೆ ಅನ್ಯಾಯ ಮಾಡಿ ಬೇರೆಯವರಿಗೆ ಮೀಸಲಾತಿ ಕೊಟ್ರೂ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸುಪ್ರೀಂ ಕೋರ್ಟ್ನಲ್ಲಿ ಕೆಲಸ ಮಾಡೋ ಆಸಕ್ತಿ ಇದ್ಯಾ!? ಪದವಿ ಪಾಸಾದವರು ಇಂದೇ ಅಪ್ಲೈ ಮಾಡಿ!
ಈ ಸಂಬಂಧ ಮಾತನಾಡಿದ ಅವರು, ಬಿಜೆಪಿಯವ್ರು ಈ ಹಿಂದೆ ಅಧಿಕಾರದಲ್ಲಿದ್ದಾಗ ಮುಸ್ಲಿಂ ಸಮುದಾಯದ ಶೇ.4ರಷ್ಟು ಮೀಸಲಾತಿ ವಾಪಸ್ ಪಡೆದು ಒಕ್ಕಲಿಗ ಹಾಗೂ ಲಿಂಗಾಯತ ಸಮುದಾಯಗಳಿಗೆ ಹಂಚಿಕೆ ಮಾಡಿದ್ರು ಎಂದರು.
ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ವಿಚಾರವಾಗಿ ಹಿಂದಿನ ಸರ್ಕಾರ ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ್ದ ಅಫಿಡವಿಟ್ ಹಾಗೂ ನ್ಯಾಯಾಲಯದ ಆದೇಶವನ್ನು ಸದನದ ಮುಂದೆ ಮಂಡಿಸಲಾಗುವುದು ಎಂದು ತಿಳಿಸಿದರು.
ಪಂಚಮಸಾಲಿ ಮುಖಂಡರೊಂದಿಗೆ ಎರಡು ಬಾರಿ ಸಭೆ ನಡೆಸಿದ್ದೇನೆ. ಪಂಚಮಸಾಲಿಗಳು ಮೀಸಲಾತಿ ಕೇಳಲು ನಾನು ಅಡ್ಡಿಯಾಗಿಲ್ಲ ಎಂದರು. ಈ ವೇಳೆ ಸ್ಪಷ್ಟನೆ ನೀಡಿದ ಗೃಹ ಸಚಿವರು 5,000 ಟ್ರ್ಯಾಕ್ಟರ್ಗಳನ್ನು ತರಲು ಮುಂದಾಗಿದ್ದಾರೆ. ಹಾಗಾಗಿ ಲಾ ಅಂಡ್ ಆರ್ಡರ್ ಸಮಸ್ಯೆ ಆಗುತ್ತೆ ಅಂತ ಅನುಮತಿ ಕೊಡಲಿಲ್ಲ. ನಂತರ ಜನ ಬರ್ತಾರೆ ವಾಹನಗಳಲ್ಲಿ ಅಂದ್ರು, ಜನ ಬರೋ ವಾಹನಗಳಿಗೂ ನಾವು ಮಿತಿ ಹಾಕಿದ್ದೇವೆ. ಪ್ರತಿಭಟನೆ ಮಾಡಲು ಅಡ್ಡಿ ಇಲ್ಲ, ಆದ್ರೆ ಕಾನೂನು ಸುವ್ಯವಸ್ಥೆ ಕಾಪಾಡಬೇಕು ಅಷ್ಟೇ ಎಂದು ಗೃಹಸಚಿವರು ತಿಳಿಸಿದ್ರು