ದಾವಣಗೆರೆ: ದಾವಣಗೆರೆ ಜಿಲ್ಲೆಗೆ ಬಿಜೆಪಿ ಬರ ಅಧ್ಯಯನ ತಂಡ ಭೇಟಿ ನೀಡಿ ಹರಿಹರ ತಾಲೂಕಿನ ಬೆಳ್ಳೂಡಿ ಮತ್ತು ಭಾನುವಳ್ಳಿ ಹಾಗೂ ಹೊನ್ನಾಳಿ ತಾಲೂಕಿನ ಮಾದನಬಾವಿ ಬಳಿ ಮಕ್ಕೆಜೋಳ ಬೆಳೆ ಪರಿಶೀಲನೆ ನಡೆಸಿದ್ದಾರೆ.
ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನೇತೃತ್ವದ ತಂಡದಿಂದ ಬರ ಪರಿಶೀಲನೆ ನಡೆದಿದ್ದು, ಸಂಸದ ಜಿ ಎಂ ಸಿದ್ದೇಶ್ವರ್ ಜಿಲ್ಲೆಯ ಬಿಜೆಪಿ ಮುಖಂಡರು ಭಾಗಿಯಾಗಿದ್ದರು. ಇನ್ನೂ ಬೆಳೆ ನಷ್ಟದ ಬಗ್ಗೆ ರೈತರಿಂದ ಮಾಹಿತಿ ಪಡೆದ ನಾಯಕರು ಒಂದೇ ದಿನದಲ್ಲಿ ಹರಿಹರ, ಹೊನ್ನಾಳಿ, ಚನ್ನಗಿರಿ, ಮಾಯಕೊಂಡ ತಾಲೂಕಿನಲ್ಲಿ ಬರ ಪರಿಶೀಲನೆ ನಡೆಸಲಿದ್ದಾರೆ.