ಚಿತ್ರದುರ್ಗ:- ಬಿಜೆಪಿ ಸಮಾಜ ಒಡೆಯುವ ನೀತಿ ಹೊಂದಿದೆ ಎಂದು ಸಚಿವ ಸುಧಾಕರ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ನೇಮಕಗೊಂಡಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ‘ಹೊಸ ಬಾಟಲಿಗೆ ಹಳೆ ವೈನ್’ ಎಂದು ವ್ಯಂಗ್ಯವಾಡಿದ್ದಾರೆ.
ಬಿಜೆಪಿ ಸಮಾಜ ಒಡೆಯುವ ನೀತಿ ಹೊಂದಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರ ಹಿಡಿಯಲು ಸಾಧ್ಯವಿಲ್ಲ. ಅವರ ಪಕ್ಷದ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವುದಿಲ್ಲ’ ಎಂದರು.
ಸಮಾಜದಲ್ಲಿರುವ ಎಲ್ಲ ಜಾತಿಯವರು ನಮ್ಮ ಪಕ್ಷದೊಂದಿಗೆ ಇದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಜಯೇಂದ್ರ ಅವರಿಗೆ ಹೋಲಿಕೆ ಮಾಡಲು ಸಾಧ್ಯವಿಲ್ಲ. ಪಕ್ಷ ಸಂಘಟನೆಯಲ್ಲಿ ಡಿ.ಕೆ.ಶಿವಕುಮಾರ್ ಅನುಭವ ದೊಡ್ಡದು’ ಎಂದು ಹೇಳಿದರು.