ಬೆಂಗಳೂರು:- ಪಕ್ಷ ವಿರೋಧಿ ಹೇಳಿಕೆ ನೀಡುತ್ತಿರುವ ಬಿಜೆಪಿ ಶಾಸಕ ಯತ್ನಾಳ್ ಗೆ ಕೇಂದ್ರದ ಶಿಸ್ತು ಸಮಿತಿಯಿಂದ ನೋಟಿಸ್ ಜಾರಿ ಮಾಡಲಾಗಿದೆ.
ಪಕ್ಷ ವಿರೋಧಿ ಹೇಳಿಕೆ ಹಾಗೂ ನಡೆಯನ್ನ ನೀವು ತೋರುತ್ತಿದ್ದೀರಿ. ವಿನಾಕಾರಣ ಸುಳ್ಳು ಆರೋಪಗಳನ್ನ ಪಕ್ಷದ ವಿರುದ್ಧವೇ ಮಾಡುತ್ತಿದ್ದೀರಿ. ಇದು ಪಕ್ಷದ ಚೌಕಟ್ಟನ್ನ ಹಾಗೂ ನಿಯಮವನ್ನ ಮೀರಿದೆ. ಹೀಗಾಗಿ ನಿಮ್ಮ ವಿರುದ್ಧ ಯಾಕೆ ಕ್ರಮ ತೆಗೆದುಕೊಳ್ಳಬಾರದು ಎಂದು ನೋಟಿಸ್ ನಲ್ಲಿ ಉಲ್ಲೇಖ ಮಾಡಲಾಗಿದೆ.
ನೋಟಿಸ್ ಗೆ ತಕ್ಷಣವೇ ಉತ್ತರ ನೀಡಿ. ಇಲ್ಲದಿದ್ದರೆ ನಿಮಗೆ ಏನೂ ಹೇಳಲು ಉಳಿದಿಲ್ಲ ಎಂದು ತಿಳಿದುಕೊಳ್ಳಬೇಕಾಗುತ್ತದೆ. ಶಿಸ್ತು ಸಮಿತಿ ನಿಯಮಾನುಸಾರ ಕ್ರಮ ತೆಗೆದುಕೊಳ್ಳಲಿದೆ ಎಂದು ನೋಟಿಸ್ ನಲ್ಲಿ ತಿಳಿಸಲಾಗಿದೆ.