ಬೆಂಗಳೂರು: ವಿಧಾನಸಭೆ ಮತ್ತು ವಿಧಾನಪರಿಷತ್ ವಿಪಕ್ಷ ನಾಯಕರ ಆಯ್ಕೆ ವಿಚಾರ ಸಂಬಂಧ ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ವೀಕ್ಷಕರು ಬೆಂಗಳೂರಿಗೆ ಆಗಮಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಕುಮಾರ್ ಆಗಮಿಸಿದ್ದಾರೆ.ವೀಕ್ಷಕರು ಸಂಜೆ ನಡೆಯುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ದುಶ್ಯಂತ್ ಕುಮಾರ್ ಗೌತಮ್ ಹಾಗೂ ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಆದರು.
ವಿಪಕ್ಷ ನಾಯಕರ ಆಯ್ಕೆ ವಿಚಾರ ಸಂಬಂಧ ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ವೀಕ್ಷಕರು ಬೆಂಗಳೂರಿಗೆ ಆಗಮಿಸಿದ್ದಾರೆ.

