ಬೆಂಗಳೂರು:– ನಮ್ಮ ಕಾರ್ಯಕರ್ತರ ನೆರವಿಗೆ ಬಿಜೆಪಿ ಸದಾ ಸಿದ್ಧ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ರಾಜ್ಯದ ಯಾವುದೇ ಮೂಲೆಯಲ್ಲೂ ನಮ್ಮ ಕಾರ್ಯಕರ್ತರಿಗೆ ತೊಂದರೆ, ಬೆದರಿಕೆ, ಕಿರುಕುಳಗಳು ಎದುರಾದರೆ ಅವರ ನೆರವಿಗೆ ಪಕ್ಷ ತಕ್ಷಣ ಬರಲಿದೆ ಎಂದರು.
ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ನಮ್ಮ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಟ್ಟುಕೊಂಡು ಪೊಲೀಸ್ ಕಿರುಕುಳ ನೀಡುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಸಾಮಾಜಿಕ ಜಾಲತಾಣ ಸೇರಿದಂತೆ ಯಾವುದೇ ವೇದಿಕೆಗಳಲ್ಲಿ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಧೋರಣೆಯ ವಿರುದ್ಧ ಹಾಗೂ ಸರ್ಕಾರದ ವೈಫಲ್ಯಗಳ ವಿರುದ್ಧ ದನಿ ಎತ್ತಲು ಕಾರ್ಯಕರ್ತರು ಯಾವುದಕ್ಕೂ ಅಂಜಬೇಕಿಲ್ಲ ಎಂದು ಹೇಳಿದ್ದಾರೆ.
ಸಂವಿಧಾನ ನಮಗೆ ಕೊಡಮಾಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಅಧಿಕಾರವನ್ನು ಪೊಲೀಸರಿಗೆ ನೀಡಿಲ್ಲ. ಈ ನಿಟ್ಟಿನಲ್ಲಿ ರಾಜ್ಯದ ಯಾವುದೇ ಮೂಲೆಯಲ್ಲೂ ನಮ್ಮ ಕಾರ್ಯಕರ್ತ ಬಂಧುಗಳಿಗೆ ತೊಂದರೆ, ಬೆದರಿಕೆ, ಕಿರುಕುಳಗಳು ಎದುರಾದರೆ ಅವರ ನೆರವಿಗೆ ಪಕ್ಷ ತಕ್ಷಣ ಬರಲಿದೆ ಎಂದು ಭರವಸೆ ನೀಡಿದ್ದಾರೆ.