ಹಾಸನ:- ದೇಶದ ಅಖಂಡತೆಗೆ ಧಕ್ಕೆ ತರುವ ಕೆಲಸ ಬಿಜೆಪಿ ಮಾಡುತ್ತಿದೆ ಎಂದು ಈಶ್ವರ್ ಖಂಡ್ರೆ ಹೇಳಿದ್ದಾರೆ.
ಮುಸ್ಲಿಂ ಸಮುದಾಯ ಅಭಿವೃದ್ಧಿಗೆ 10 ಸಾವಿರ ಕೋಟಿ ನೀಡುತ್ತೇನೆ ಎಂಬ ಹೇಳಿಕೆಗೆ ವಿಪಕ್ಷ ಶಾಸಕರು ವಿರೋಧ ವ್ಯಕ್ತಪಡಿಸುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಈಶ್ವರ್ ಖಂಡ್ರೆ, ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಅಂತಾ ಮುಖ್ಯಮಂತ್ರಿಗಳು ಈಗಾಗಲೇ ಹೇಳಿದ್ದಾರೆ. ಈ ರಾಜ್ಯದಲ್ಲಿರುವ ಎಲ್ಲಾ ಸಮುದಾಯಗಳಿಗೂ ಸಾಮಾಜಿಕ ನ್ಯಾಯ, ಸಂವಿಧಾನ ಬದ್ಧ ಆಡಳಿತ ಕೊಡುತ್ತೇವೆ ಅಂತ ಹೇಳಿದ್ದಾರೆ, ಅದರಲ್ಲಿ ತಪ್ಪೇನಿದೆ ಎಂದರು.
ಯಾರಿಗೂ ಅನ್ಯಾಯ ಮಾಡಲ್ಲ, ಬೇರೆಯವರ ರೀತಿ ಅವರಿಗೂ ಸಂಪೂರ್ಣವಾದಂತಹ ಹಕ್ಕಿದೆ. ನ್ಯಾಯಯುತವಾಗಿ ಏನು ಮಾಡಬೇಕು ಅದನ್ನು ಜಾರಿ ಮಾಡುತ್ತೇವೆ ಅಂತ ಹೇಳಿದ್ದಾರೆ. ನೀವು ಅದಕ್ಕೂ ಧೃವಿಕರಣ ಮಾಡುತ್ತೀರಿ, ಅದರಲ್ಲೂ ಜಾತಿ, ಧರ್ಮ ತರುತ್ತೀರಿ. ಬರೀ ಜಾತಿ ಜಾತಿಗಳಲ್ಲಿ, ಧರ್ಮ ಧರ್ಮಗಳಲ್ಲಿ ಒಡೆದಾಳುವ ನೀತಿಯನ್ನು ಅನುಸರಿಸಿ ಇಡೀ ಸಾಮರಸ್ಯ ಕದಡುತ್ತಿದ್ದೀರಿ. ಈ ದೇಶದ ಸಮಗ್ರತೆ, ಏಕತೆ, ಅಖಂಡತೆಗೆ ಧಕ್ಕೆ ತರುವ ಕೆಲಸ ಬಿಜೆಪಿ ಮಾಡುತ್ತಿದೆ. ಅದನ್ನು ಖಂಡಿಸುತ್ತೇನೆ ಎಂದರು.