ಬೆಂಗಳೂರು: ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ವಿರೋಧ ಪಕ್ಷವನ್ನು ಮುಗಿಸಬೇಕು ಅಂತ ಸಂಚು ಮಾಡುತ್ತಿದೆ. ವಿಪಕ್ಷದವರ ಧ್ವನಿ ಕಟ್ಟಿಹಾಕಲು ಕೆಲವರನ್ನು ಐಟಿ ಮತ್ತು ಇಡಿ ಮೂಲಕ ಹೆದರಿಸುತ್ತಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
Bangalore Kambala: ಅರಮನೆ ಮೈದಾನ ಸುತ್ತಮುತ್ತ ಸಂಚಾರ ಮಾರ್ಗ ಬದಲಾವಣೆ : ಇಲ್ಲಿದೆ ಡಿಟೇಲ್ಸ್
ನಗರದಲ್ಲಿ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷರಿಂದ ಹಿಡಿದು ಕೆಪಿಸಿಸಿ ಅಧ್ಯಕ್ಷರ ತನಕವೂ ನಾಯಕರ ವಿರುದ್ದ ಸಂಚು ರೂಪಿಸುತ್ತಿದೆ. ಅನವಶ್ಯಕವಾಗಿ ಡಿಕೆ ಶಿವಕುಮಾರ್ ಅವರ ವಿರುದ್ದ ಹಿಂದಿನ ಬಿಜೆಪಿ ಸರ್ಕಾರ ಪ್ರಾಮಾಣಿಕವಾಗಿ ಸಂಚು ರೂಪಿಸುವ ಕೆಲಸ ಮಾಡಿತ್ತು.
ಕೊಲೆ ಮಾಡಿದರೂ ಪರವಾಗಿಲ್ಲ ಅಂತವರಿಗೆ ಏನೂ ಆಗಿಲ್ಲ. ಆದರೆ ನಮ್ಮನ್ನು ಮಾತ್ರ ಹೆದರಿಸುತ್ತಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.