ಬೆಂಗಳೂರು: ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಜೆಡಿಎಸ್ ಜೊತೆಗಿನ ಸೀಟು ಹಂಚಿಕೆಯಲ್ಲಿ ಯಾವುದೇ ಗೊಂದಲ ಇಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸ್ಪಷ್ಟಪಡಿಸಿದರು. ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರನ್ನು ದೆಹಲಿಯಲ್ಲಿ ಭೇಟಿ ಆದ ಬಳಿಕ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ನನಗೆ ಫೋನ್ ಮಾಡಿ ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದರು.
iPhone 16 ಲೈನ್ಅಪ್ ಬಗ್ಗೆ ನಿಮಗೇನು ಗೊತ್ತು?: A18 ಚಿಪ್ ಯಾಕೆ ಹಾಕ್ತಾರೆ ಗೊತ್ತಾ?
ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಸಂಚಲನ ಸೃಷ್ಟಿಸುವ ಭರವಸೆ ಮೂಡಿಸಿದೆ. ಈ ಭೇಟಿ ಸ್ಫೂರ್ತಿದಾಯಕ ಅಂತ ಕುಮಾರಸ್ವಾಮಿ ತಿಳಿಸಿದರು. ದೇವೇಗೌಡರ ಜತೆಗೂ ಪ್ರಧಾನಿಯವರು ಆತ್ಮೀಯವಾಗಿ ಮಾತಾಡಿದ್ದಾರೆ. ಈ ಸಲ ಲೋಕಸಭೆ ಚುನಾವಣೆಯಲ್ಲಿ ನಾವು ಎಲ್ಲಾ ಸ್ಥಾನಗಳನ್ನೂ ಗೆಲ್ಲುತ್ತೇವೆ ಎಂದು ಹೇಳಿದರು. “ಪ್ರಧಾನಿಯವರ ಜತೆ ಟಿಕೆಟ್ ಹಂಚಿಕೆ ವಿಚಾರವಾಗಿ ಏನೂ ಮಾತಾಡಿಲ್ಲ ಅಂತ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಆದರೆ ಈ ವಿಚಾರದಲ್ಲಿ ಯಾವುದೇ ತಕರಾರು ಇಲ್ಲ. ಸೀಟು ಹಂಚಿಕೆಯಲ್ಲಿ ಒಂದು ಸೀಟ್ ಹೆಚ್ಚು ಕಡಿಮೆ ಆದರೂ ನಡೆಯುತ್ತದೆ ಎಂದಿದ್ದಾರೆ.