ಹುಬ್ಬಳ್ಳಿ: ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಆಗಿ ಕಣದಲ್ಲಿದ್ದ ಅಜ್ಜಂಪೀರ್ ಖಾದ್ರಿ ಅವರ ಮನವೊಲಿಸಿ ವಾಪಸ್ ಪಡೆಯುವಲ್ಲಿ ಯಶಸ್ವಿಯಾದ ಸಚಿವ ಜಮೀರ್ ಅಹ್ಮದ್ ಖಾನ್ ಅಜ್ಜಂಪೀರ್ ಖಾದ್ರಿ ಜೊತೆಯಲ್ಲಿಯೇ ಹುಬ್ಬಳ್ಳಿ ವಿಮಾನಕ್ಕೆ ತಡರಾತ್ರಿ ಆಗಮಿಸಿದರು. ನಂತರ ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್ ಖಾದ್ರಿ ಯಾವುದೇ ಕರಾರು ಹಾಕದೇ ಹಣದಿಂದ ಹಿಂದೇ ಸರಿದಿದ್ದಾರೆ ಎಂದರು. ಈ ಕುರಿತು ಡಿಟೇಲ್ ಸ್ಟೋರಿ ಇದೆ ನೋಡಿ.
ಇದೇ ವೇಳೆ ವಕ್ಪ್ ಸಚಿವ ಜಮೀರ್ ಅಹ್ಮದ್ ಖಾನ್ ವಕ್ಪ್ ವಿಚಾರವಾಗಿ ಭಾರತೀಯ ಜನತಾ ಪಕ್ಷ ರಾಜಕೀಯ ಮಾಡುತಿದ್ದು ವಿನಾಕಾರಣ ಸರ್ಕಾರ ಹಾಗೂ ತಮ್ಮ ಮೇಲೆ ಇಲ್ಲಸಲ್ಲದ ಆರೋಪ ಮಾಡುತಿದ್ದಾರೆ ಎಂದರು.ವಕ್ಫ್ ಆಸ್ತಿ ವಿಚಾರದಲ್ಲಿ ಬಿಜೆಪಿ ನಾಯಕರು ರಾಜಕೀಯ ಲಾಭಕ್ಕಾಗಿ ಅಪ ಪ್ರಚಾರ ಮಾಡುತ್ತಿದ್ದು, ಅದಕ್ಕೆಲ್ಲ ನಾನು ಹೆದರುವುದಿಲ್ಲ ಎಂದರು.
ವಕ್ಫ್ ಆಸ್ತಿ ತೆರವು ಸಂಬಂಧ ನೋಟಿಸ್ ನೀಡುವ ಪ್ರಕ್ರಿಯೆ ಎಲ್ಲ ಸರ್ಕಾರದಿಂದಲೂ ನಡೆದಿದೆ. ಬಿಜೆಪಿ ಸರ್ಕಾರದಲ್ಲೂ ಕೊಡಲಾಗಿದೆ. ಆದರೆ, ಈಗ ಚುನಾವಣೆ ಲಾಭಕ್ಕಾಗಿ ಬಿಜೆಪಿ ಈ ವಿಚಾರದಲ್ಲಿ ಜನರನ್ನು ತಪ್ಪು ಹಾದಿಗೆ ಎಳೆಯುತ್ತಿದೆ. ವಕ್ಫ್ ಆಸ್ತಿ ಆಗಲಿ, ಮುಜರಾಯಿ ಆಸ್ತಿ ಆಗಲಿ ಅದು ದೇವರ ಆಸ್ತಿ. ದಾನಿಗಳು ಸಮುದಾಯದ ಹಿತಕ್ಕೆ ನೀಡಿರುವ ಆಸ್ತಿ. ಅದನ್ನು ಉಳಿಸುವುದು ನಮ್ಮ ಕರ್ತವ್ಯ ಆಗಬೇಕು. ಮುಜರಾಯಿ ಆಸ್ತಿ ತೆರವು ಮಾಡಲು ನಾನು ಕೈಜೋಡಿಸುತ್ತೇನೆ.
ರೈತರಿಗೆ ಕೇಂದ್ರದಿಂದ ಮತ್ತೊಂದು ಬಂಪರ್ ಯೋಜನೆ! ಶೇಕಡಾ 50 ರಷ್ಟು ಸಬ್ಸಡಿ ಘೋಷಿಸಿದ ಸರ್ಕಾರ
ನ್ಯಾಯಾಲಯದ ಆದೇಶ ದ ಪ್ರಕಾರ ವಕ್ಫ್ ಆಸ್ತಿ ಸಂರಕ್ಷಣೆ ಮಾಡಲಾಗುತ್ತಿದೆ. ಬಿಜೆಪಿಯವರ ಆರೋಪದಂತೆ ಸಿಕ್ಕ ಸಿಕ್ಕ ಜಾಗವನ್ನು ವಕ್ಫ್ ಆಸ್ತಿ ಎಂದು ಎಲ್ಲೂ ಹೇಳಿಲ್ಲ ಎಂದು ಸ್ಪಷ್ಟ ಪಡಿಸಿದರು. ಇನ್ನು ಖಾದ್ರಿ ಬಂಡಾಯ ವಿಚಾರವಾಗಿ ಮಾತನಾಡಿದ ಅವರು ನಾಮಪತ್ರ ಹಿಂದಕ್ಕೆ ಪಡೆಯಬಾರದೆಂದು ಅಭಿಮಾನಿಗಳು ಒತ್ತಡ ಹಾಕುತ್ತಿರುವುದರಿಂದ ಖಾದ್ರಿ ನಡೆ ಕುತೂಹಲ ಕೆರಳಿಸಿತ್ತು.
ಖಾದ್ರಿ ಅವರು ಬುಧವಾರ ನಾಮಪತ್ರ ವಾಪಸ್ ಪಡೆದು ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ ಪರ ಕೆಲಸ ಮಾಡಲಿದ್ದು ಕಾಂಗ್ರೆಸ್ ಗೆಲುವಿಗೆ ಶ್ರಮಿಸಲಿದ್ದಾರೆ ಎಂದರು. ಇದೇ ವೇಳೆ ಸಹ ಮಾತನಾಡಿದ ಅಜ್ಜಂಪೀರ್ ಖಾದ್ರಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಜಮೀರ್ ಅಹಮದ್ ಖಾನ್ ಅವರ ಮಾತಿಗೆ ಒಪ್ಪಿ ಅವರ ಮೇಲೆ ಭರವಸೆ ಇಟ್ಟು ನಾಮಪತ್ರ ವಾಪಸ್ ಪಡೆಯಲಿದ್ದೇನೆ. ಯಾವುದೇ ಷರತ್ತು ಹಾಕಿಲ್ಲ ಎಂದರು. ಇದಕ್ಕೋ ಮುನ್ನ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಖಾದ್ರಿ ಅವರನ್ನು ಅಭಿಮಾನಿಗಳು ಸ್ವಾಗತಿಸಿದರು. ಇನ್ನು ಜಮೀರ್-ಖಾದ್ರಿ ಸಚಿವ ಜಮೀರ್ ಅಹಮದ್ ಖಾನ್ ಮಂಗಳವಾರ ಹುಬ್ಬಳ್ಳಿಯಲ್ಲಿ ನೆಲೆಸಿದರು.