ಗದಗ :-ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ವಿದ್ಯುತ್ ಅವಘಡದ ದುರಂತದಿಂದಾಗಿ ಚಿತ್ರನಟ ಯಶ್ ಅಭಿಮಾನಿಗಳು ಸಾವಿಗೀಡಾಗಿದ್ದರು.
ಮೃತ ಮುರುಳಿ, ನವೀನ್, ಹನುಮಂತ ರವರ ಮನೆಗೆ
ನರಗುಂದ ಶಾಸಕ ಹಾಗೂ ಮಾಜಿ ಸಚಿವ ಸಿ.ಸಿ ಪಾಟೀಲ, ಶಿರಹಟ್ಟಿ ಶಾಸಕ ಡಾ ಚಂದ್ರು ಲಮಾಣಿ, ವಿದಾನ ಪರಿಷತ್ ಸದಸ್ಯ ಎಸ್.ವಿ ಸಂಕನೂರ ಭೇಟಿ ನೀಡಿ
ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.
10 ಸಾವಿರ ರೂಪಾಯಿ ವಯಕ್ತಿಕ ಪರಿಹಾರ ನೀಡಿದ ಮಾಜಿ ಸಚಿವ ಸಿ.ಸಿ ಪಾಟೀಲ. ತಲಾ 3 ಕುಟುಂಬಕ್ಕೂ ಪ್ರತ್ಯೇಕ 10 ಸಾವಿರ ರೂಪಾಯಿ ಪರಿಹಾರ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಮಕ್ಕಳನ್ನು ಕಳೆದುಕೊಂಡು ಎದೆ ಬಡಿದುಕೊಂಡು ಅಳುತ್ತಿರುವ ಹೆತ್ತವರ ಆಕ್ರಂಧನ ಮುಗಿಲು ಮುಟ್ಟುವಂತಿತ್ತು.