ನವದೆಹಲಿ:- ಕಾರ್ಖಾನೆ ಜಟಾಪಟಿ ವಿಚಾರದಲ್ಲಿ ಸುಪ್ರೀಂಕೋರ್ಟ್ನಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ಗೆ ಗೆಲುವು ಸಾಧಿಸಿದೆ.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಿದ್ಧಸಿರಿ ಸಹಕಾರಿ ಸೌಹಾರ್ದ ನಿಯಮಿತ ಸಕ್ಕರೆ ಕಾರ್ಖಾನೆ ಪುನಾರಂಭಕ್ಕೆ ಅನುಮತಿ ನೀಡಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.
ಜಿಲ್ಲೆಯ ಚಿಂಚೋಳಿಯಲ್ಲಿರುವ ಸಿದ್ಧಸಿರಿ ಸಹಕಾರಿ ಸೌಹಾರ್ದ ನಿಯಮಿತ ಸಕ್ಕರೆ ಕಾರ್ಖಾನೆಯನ್ನು ಪುನಾರಂಭಕ್ಕೆ ಏಳು ದಿನಗಳಲ್ಲಿ ಅನುಮತಿ ನೀಡಬೇಕೆಂದು ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚಿಸಿದ್ದು, ಕಾನೂನು ಸಮರದಲ್ಲಿ ಯತ್ನಾಳ್ಗೆ ಗೆಲುವಾಗಿದೆ.
ಕೆಲ ಕಾರಣಗಳನ್ನು ನೀಡಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ (ಕೆಎಸ್ಪಿಸಿಬಿ) ಸಿದ್ಧಸಿರಿ ಸಹಕಾರಿ ಸೌಹಾರ್ದ ನಿಯಮಿತ ಸಕ್ಕರೆ ಕಾರ್ಖಾನೆ ತೆರೆಯಲು ಅನುಮತಿ ನೀಡಿರಲಿಲ್ಲ. ಇದನ್ನು ಪ್ರಶ್ನಿಸಿ ಯತ್ನಾಳ್, ಹೈಕೋರ್ಟ್ ಮೆಟ್ಟಿಲೇರಿದ್ದರು. ಆಗ ಹೈಕೋರ್ಟ್ ಕಾರ್ಖಾನೆ ತೆರೆಯಲು ಅನುಮತಿ ಆದೇಶಿಸಿತ್ತು. ಆದ್ರೆ, ಕೆಎಸ್ಪಿಸಿಬಿ, ಹೈಕೋರ್ಟ್ನ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು. ಇದೀಗ ಸುಪ್ರೀಂಕೋರ್ಟ್ ಸಹ ಹೈಕೋರ್ಟ್ನ ಆದೇಶವನ್ನು ಎತ್ತಿಹಿಡಿದೆ.