ಬೆಂಗಳೂರು:- ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಬಿಜೆಪಿ ಸಂಸದ ಡಾ. ಕೆ ಸುಧಾಕರ್ ಧನ್ಯವಾದ ತಿಳಿಸಿದ್ದಾರೆ.
ಮಾವಿನ ಎಲೆಗಳ ಆರೋಗ್ಯ ಬೆನಿಫಿಟ್ ಬಗ್ಗೆ ಕೇಳಿದ್ರೆ ನೀವೇ ಅಚ್ಚರಿ ಪಡ್ತೀರಾ!
ಈ ಸಂಬಂಧ ಮಾತನಾಡಿದ ಅವರು, ಎತ್ತಿನಹೊಳೆ ಯೋಜನೆಯಲ್ಲಿ ನಾನು ಯಾವುದೇ ಕಾರಣಕ್ಕೂ ರಾಜಕೀಯ ಮಾಡಲು ಹೋಗುವುದಿಲ್ಲ ಎಂದರು.
2014 ರಲ್ಲಿ ಎತ್ತಿನಹೊಳೆ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅವರು ನನ್ನ ಅಧ್ಯಕ್ಷತೆಯಲ್ಲೇ ಶಂಕುಸ್ಥಾಪನೆ ಮಾಡಿದರು. ಇವತ್ತು ಯೋಜನೆಯ ಮೊದಲ ಹಂತದ ಉದ್ಘಾಟನಾ ಕಾರ್ಯಕ್ರಮಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನನಗೆ ವೈಯಕ್ತಿಕವಾಗಿ ಆಹ್ವಾನ ಕೊಟ್ಟಿದ್ದರು. ನಾನು ಅವರಿಗೆ ಆಭಾರಿ ಆಗಿರುತ್ತೇನೆ ಎಂದು ಹೇಳಿದರು.
ಈಗ ಎತ್ತಿನಹೊಳೆ ಯೋಜನೆಯ ಪರಿಷ್ಕೃತ ಅಂದಾಜು ಮೊತ್ತ 24 ಸಾವಿರ ಕೋಟಿ ರೂ. ಆಗಿದೆ. ಕೋಲಾರ-ಚಿಕ್ಕಬಳ್ಳಾಪುರಕ್ಕೆ ಮೊದಲ ಹಂತದಲ್ಲಿ ನೀರು ತರುವುದು ಸಾಧ್ಯವಾಗಲಿಲ್ಲ. ಇದಕ್ಕೆ ಇನ್ನೂ ಜಲಾಶಯ ನಿರ್ಮಾಣ ಬಾಕಿ ಇದೆ. ಇನ್ನೂ ಭೂಸ್ವಾಧೀನ ಕೆಲಸ ಬಾಕಿ ಇದೆ.
ಮುಂದುವರೆಯಬೇಕಿರುವ ಕಾಮಗಾರಿಗಳನ್ನು ಆದಷ್ಟು ಪ್ರಾಶಸ್ತ್ಯ ರೂಪದಲ್ಲಿ ಕೈಗೊಳ್ಳಲಿ ಎಂದು ನಾನು ಡಿಕೆಶಿ ಅವರಿಗೆ ಮನವಿ ಮಾಡುತ್ತೇನೆ. ನಮ್ಮ ಜಿಲ್ಲೆಗಳಲ್ಲಿ ಎಸ್ಟಿಪಿ ನೀರು ಕುಡಿಯುತ್ತಿದ್ದೇವೆ. ಎಸ್ಟಿಪಿ ನೀರು ಕುಡಿಯುವಂತಹ ನಮ್ಮ ಅವಳಿ ಜಿಲ್ಲೆಗಳ ಜನರ ಶಾಪಕ್ಕೆ ನಾವು ಒಳಗಾಗಿದ್ದಾರೆ. ಈ ಶಾಪದಿಂದ ಈ ಸರ್ಕಾರ ನಮ್ಮನ್ನು ವಿಮುಕ್ತಿ ಮಾಡಲಿ ಎಂದು ಕೇಳಿಕೊಂಡರು.
ಎತ್ತಿನಹೊಳೆ ಯೋಜನೆ ಕೈಗೆತ್ತಿಕೊಂಡಿದ್ದು ಸಿದ್ದರಾಮಯ್ಯ ನೇತೃತ್ವದ ಅಂದಿನ ಕಾಂಗ್ರೆಸ್ ಸರ್ಕಾರ. ಇದರಲ್ಲಿ ಎರಡು ಮಾತಿಲ್ಲ. ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಗಡಿ ಭಾಗಕ್ಕೆ ಕೃಷ್ಣ ನೀರು ಬಂದಿದೆ. ಕೃಷ್ಣ ನೀರನ್ನು ಬಳಸಿಕೊಂಡರೆ ಶಾಶ್ವತ ಪರಿಹಾರ ಸಿಗುತ್ತದೆ. ಈ ಸಂಬಂಧ ಆಂಧ್ರ ಸಿಎಂ ಜೊತೆ ಮಾತನಾಡಿ, ಕೇಂದ್ರಕ್ಕೂ ಸರ್ವಪಕ್ಷ ನಿಯೋಗ ಕೊಂಡೊಯ್ದರೆ ಇದು ಸಾಧ್ಯವಾಗುತ್ತೆ.
ಚಂದ್ರಬಾಬುನಾಯ್ಡು ನಮ್ಮ ಎನ್ಡಿಎ ಒಕ್ಕೂಟದ ಒಂದು ಭಾಗ. 10 ಟಿಎಂಸಿ ನೀರನ್ನು ನಾರಾಯಣಪುರ ಜಲಾಶಯದ ಮೂಲಕ ಆಂಧ್ರಕ್ಕೆ ಕೊಟ್ಟು, ಕೃಷ್ಣ ನೀರನ್ನು ಈ ಭಾಗದಲ್ಲಿ ಬಳಸಿಕೊಳ್ಳಬೇಕು. ಆರು ತಿಂಗಳೊಳಗೆ ಇದು ಸಾಧ್ಯವಾಗುತ್ತದೆ. ಶಾಶ್ವತ ಪರಿಹಾರವೂ ಸಿಗುತ್ತದೆ. ಎತ್ತಿನಹೊಳೆ ಎರಡನೇ ಹಂತದ ಕಾಮಗಾರಿ ಕೈಗೆತ್ತಿಕೊಳ್ಳಿ. ಅದಕ್ಕಿಂತ ಸುಲಭವಾಗಿ ಇದನ್ನ ಮಾಡಬಹುದು. ನೆರೆಯ ಆಂಧ್ರದ ಗಡಿಗೆ ಬಂದಿರುವ ಕೃಷ್ಣ ನೀರು ಬಳಕೆಗೆ ಕ್ರಮವಹಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.