ಬೆಂಗಳೂರು:– ಬಿಜೆಪಿ ಸಂಸದ ಸುಧಾಕರ್ ಸವಾಲನ್ನು ಪ್ರೀತಿಯಿಂದ ಸ್ವೀಕರಿಸ್ತೇನೆ ಎಂದು DCM ಡಿಕೆ ಶಿವಕುಮಾರ್ ಹೇಳಿದ್ದಾರೆ.
ಮಧುಮೇಹಿಗಳು ತಿಳಿಯಲೇಬೇಕು: ಜೇನುತುಪ್ಪ ಮತ್ತು ಬೆಲ್ಲ ಸೇವಿಸುವುದು ಒಳ್ಳೆಯದಾ!?
ಎತ್ತಿನಹೊಳೆ ನೀರನ್ನು ಚಿಕ್ಕಬಳ್ಳಾಪುರ ಹಾಗೂ ಕೋಲಾರ ಭಾಗಕ್ಕೆ ಎರಡು ವರ್ಷಗಳಲ್ಲಿ ಹರಿಸಿದರೆ ಡಿಕೆ ಶಿವಕುಮಾರ್ ಅವರನ್ನು ಭಗೀರಥ ಎಂದು ಕರೆಯುತ್ತೇನೆ ಎನ್ನುವ ಸಂಸದ ಸುಧಾಕರ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಇದು ನನ್ನ ಜವಾಬ್ದಾರಿ ಹಾಗೂ ಸಲಹೆ ಎಂದು ಭಾವಿಸುತ್ತೇನೆ. ಎತ್ತಿನಹೊಳೆ ಭೂಮಿ ಪೂಜೆಯಲ್ಲಿ ಅವರೂ ಇದ್ದರು. ಚಿಕ್ಕಬಳ್ಳಾಪುರ ಮತ್ತು ಕೋಲಾರ ಭಾಗಕ್ಕೆ ನೀರು ದೊರೆಯಲಿ ಎಂಬುದು ಅವರ ಆಸೆ. ಅವರ ಆಸೆ ಈಡೇರಿಸುವ ಕೆಲಸ ಮಾಡೋಣ ಎಂದರು.
ಕೋಲಾರ ಭಾಗಕ್ಕೆ ಎತ್ತಿನಹೊಳೆ ನೀರು ತರಬೇಕು ಎಂದು ವೀರಪ್ಪ ಮೊಯಿಲಿ, ಕೆ.ಎಚ್.ಮುನಿಯಪ್ಪ, ಸುಬ್ಬಾರೆಡ್ಡಿ, ಶಿವಶಂಕರ್ ರೆಡ್ಡಿ, ರಮೇಶ್ ಕುಮಾರ್, ಕೃಷ್ಣಭೈರೇಗೌಡ ಹಾಗೂ ಸುಧಾಕರ್ ಸೇರಿದಂತೆ ಅನೇಕರು ಕುಡಿಯುವ ನೀರು ಹಾಗೂ ಶಾಶ್ವತ ನೀರಾವರಿಗಾಗಿ ಹೋರಾಟ ಮಾಡಿದ್ದಾರೆ. ಕೋಲಾರ ಭಾಗದ ಜನರ ನೀರಿನ ಸಂಕಷ್ಟ ನನಗೆ ಅರಿವಿದೆ ಎಂದರು.
ಖಾಸಗಿ ಕಾರ್ಯಕ್ರಮದ ನಿಮಿತ್ತ ನಾನು ಊರಿನಲ್ಲಿ ಇರುವುದಿಲ್ಲ. ಅನಂತರ ಎತ್ತಿನಹೊಳೆ ಯೋಜನೆಯಲ್ಲಿ ತುಮಕೂರು, ದೊಡ್ಡಬಳ್ಳಾಪುರ ಭಾಗದ ಸಮಸ್ಯೆಗಳ ವಿವರಣೆ ಹಾಗೂ ಅರಣ್ಯ ಭೂಮಿ ಸ್ವಾಧೀನ ತೊಂದರೆಗಳನ್ನು ಮುಖ್ಯಮಂತ್ರಿಗಳ ಬಳಿ ಒಂದು ವಾರಗಳ ನಂತರ ಮಾತನಾಡಿ ಬಗೆಹರಿಸಲಾಗುವುದು ಎಂದು ಹೇಳಿದರು.