ಬೆಂಗಳೂರು:- ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಜೆಪಿ ನಡ್ಡಾ ಬೆಂಗಳೂರಿಗೆ ಗುರುವಾರ ರಾತ್ರಿ ಆಗಮಿಸಿದ್ದಾರೆ. ನಿನ್ನೆ ರಾತ್ರಿ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಪ್ರತಿಪಕ್ಷ ನಾಯಕ ಆರ್ ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ಯುವ ಮೋರ್ಚಾ ಅಧ್ಯಕ್ಷ ಧೀರಜ್ ಸ್ವಾಗತಿಸಿದರು.
ವಿಮಾನ ನಿಲ್ದಾಣದಿಂದ ನಡ್ಡಾ ಕೆಕೆ ಗೆಸ್ಟ್ ಹೌಸ್ನತ್ತ ಪ್ರಯಾಣ ಬೆಳೆಸಿದರು. ಇಂದು ಕುಮಾರ ಕೃಪಾ ಗೆಸ್ಟ್ ಹೌಸ್ನಲ್ಲಿ ತಂಗಲಿರುವ ಅವರು ಬಿಜೆಪಿ ನಾಯಕರ ಜೊತೆ ಮಾತುಕತೆ ನಡೆಸಲಿದ್ದಾರೆ.
ವಿಮಾನ ನಿಲ್ದಾಣದ ವಿಐಪಿ ಲಾಂಜ್ನಲ್ಲಿ ರಾಜ್ಯ ಬಿಜೆಪಿ ನಾಯಕನ ಜೊತೆ ನಡ್ಡಾ ಮಾತುಕತೆ ನಡೆಸಿದರು. ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಹೇಗೆ ನಡೆಯುತ್ತಿವೆ ಎಂದು ವಿವರ ಕೇಳಿದರು. ಕರ್ನಾಟಕ ಸ್ಥಿತಿಗತಿ ಬಗ್ಗೆ ಮಾಹಿತಿ ತಿಳಿದುಕೊಂಡರು.